ADVERTISEMENT

ರೈಲು ನಿಲ್ದಾಣದಲ್ಲಿ ಲಿಫ್ಟ್‌ ಅಳವಡಿಕೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 15:12 IST
Last Updated 2 ಆಗಸ್ಟ್ 2020, 15:12 IST
ತುಮಕೂರು ರೈಲು ನಿಲ್ದಾಣದಲ್ಲಿ ಅಳವಡಿಸಿರುವ ಎಸ್ಕಲೇಟರ್
ತುಮಕೂರು ರೈಲು ನಿಲ್ದಾಣದಲ್ಲಿ ಅಳವಡಿಸಿರುವ ಎಸ್ಕಲೇಟರ್   

ತುಮಕೂರು: ತುಮಕೂರು ರೈಲು ನಿಲ್ದಾಣದಲ್ಲಿ ಅಳವಡಿಸಿರುವ ಲಿಫ್ಟ್‌ ಅನ್ನು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಔಪಚಾರಿಕವಾಗಿ ಇತ್ತೀಚೆಗೆ ಉದ್ಘಾಟಿಸಿದರು. ನಿಲ್ದಾಣದ ಒಂದು, ಎರಡು ಮತ್ತು ಮೂರನೇ ಪ್ಲಾಟ್‌ಫಾರಂಗಳಲ್ಲಿ ಈ ಲಿಫ್ಟ್‌ ಅಳವಡಿಸಲಾಗಿದೆ.

ರೈಲು ನಿಲ್ದಾಣದಲ್ಲಿ ಕೇವಲ ಒಂದು ಪ್ರಯಾಣಿಕರ ಮೇಲ್ಸೇತುವೆ ನಿರ್ಮಿಸಲಾಗಿತ್ತು. ಅಲ್ಲದೆ, ಇದಕ್ಕೆ ರ‍್ಯಾಂಪ್ ಅಳವಡಿಸಿರಲಿಲ್ಲ. ಇದರಿಂದ ವೃದ್ಧರು, ಮಹಿಳೆಯರು, ಅಶಕ್ತರು, ಗರ್ಭಿಣಿಯರು ಹಾಗೂ ಅಂಗವಿಕಲರು ಸಂಚರಿಸಲು ತೊಂದರೆ ಆಗುತ್ತಿತ್ತು. ಇದೀಗ ಎಸ್ಕಲೇಟರ್ ಅಳವಡಿಕೆಯಿಂದ ಎಲ್ಲ ಪ್ರಯಾಣಿಕರಿಗೆ ಅನುಕೂಲವಾಗಿದೆ.

ನೈಋತ್ಯ ರೈಲ್ವೆ ವಲಯದ ಪ್ರಯಾಣಿಕರ ಸಲಹಾ ಸಮಿತಿ ಸದಸ್ಯರಾದ ಕರಣಂ ರಮೇಶ್ ಮತ್ತು ರಘೋತ್ತಮ ರಾವ್, ರ‍್ಯಾಂಪ್ ನಿರ್ಮಿಸಲು ಸಾಧ್ಯವಿಲ್ಲದ ಕಾರಣ ಲಿಫ್ಟ್‌ ಅಳವಡಿಸಬೇಕು ಎಂದು ಮನವಿ ಮಾಡಿದ್ದರು. ಹಿಂದಿನ ಸಂಸದ ಎಸ್.ಪಿ.ಮುದ್ದಹನುಮೇಗೌಡ ಹಾಗೂ ಹಾಲಿ ಸಂಸದ ಜಿ.ಎಸ್.ಬಸವರಾಜು ಅವರಿಗೂ ಲಿಫ್ಟ್‌ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

ADVERTISEMENT

ಬೆಂಚ್ ಅಳವಡಿಕೆ: ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಕ್ತ ಆಸನಗಳ ವ್ಯವಸ್ಥೆ ಇಲ್ಲದ ಕಾರಣ ಕುಳಿತುಕೊಳ್ಳಲು ಆಸನಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಸ್ಟೇನ್‌ಲೆಸ್ ಸ್ಟೀಲ್‌ನ ಎರಡು ಬಗೆಯ ಮೂರು ಆಸನಗಳ 35 ಬೆಂಚುಗಳು ಬಂದಿವೆ. ಇನ್ನೂ 50 ಬೆಂಚುಗಳು ಬರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.