ADVERTISEMENT

ಸಾಂಕ್ರಾಮಿಕ ರೋಗ ತಡೆಗೆ ಕೆ.ವಿದ್ಯಾಕುಮಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 16:33 IST
Last Updated 29 ಜುಲೈ 2021, 16:33 IST

ತುಮಕೂರು: ಸೊಳ್ಳೆಗಳಿಂದ ಹರಡಬಹುದಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ ನಿರ್ದೇಶಿಸಿದರು.

ಡೆಂಗಿ ವಿರೋಧಿ ಮಾಸಾಚರಣೆ ಸಲುವಾಗಿ ನಡೆದ ಸಭೆಯಲ್ಲಿ ಮಾತ
ನಾಡಿ, ಸೊಳ್ಳೆಗಳಿಂದ ಹರಡಬಹು
ದಾದ ಡೆಂಗ್ಯೂ, ಚಿಕೂನ್‍ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡಬೇಕು’ ಎಂದು ಹೇಳಿದರು.

ಸೊಳ್ಳೆಗಳ ಉತ್ಪತ್ತಿ ತಾಣ ನಿರ್ಮೂಲನೆ ಮಾಡಬೇಕು. ಚರಂಡಿ, ತೆಂಗು, ಎಳನೀರು ಚಿಪ್ಪು, ಟೈರ್, ಗಿಡಗಳ ಪಾಟ್, ನೀರಿನ ತೊಟ್ಟಿಗಳಲ್ಲಿ ಬಳಸದ ನೀರು ಸೇರಿದಂತೆ ಘನತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಧೂಮೀಕರಣ ಮಾಡಿ, ಚರಂಡಿ, ಗುಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸೇವೆ ಬಳಸಿಕೊಂಡು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ADVERTISEMENT

ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮಗಳಲ್ಲಿ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ರೋಗಗಳು ಕಂಡುಬಂದಲ್ಲಿ ತಕ್ಷಣವೇ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಲು ಕ್ರಮ ವಹಿಸುವಂತೆ ನಿರ್ದೇಶಿಸಿದರು.

ಶಾಲೆಗಳು, ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಶೌಚಾಲಯ, ನೀರಿನ ತೊಟ್ಟಿಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸುರೇಶ್ ಬಾಬು, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ಜಿಲ್ಲಾ ನಿಯಂತ್ರಣಾಧಿಕಾರಿ ಡಾ.ಪುರುಷೋತ್ತಮ್, ಡಿಎಚ್ಒ ಡಾ.ನಾಗೇಂದ್ರಪ್ಪ, ಡಿಡಿಪಿಐ ಸಿ.ನಂಜಯ್ಯ, ಪಶುಪಾಲನಾ ಇಲಾಖೆ ಉಪನಿರ್ದೇಶಕ ದಿವಾಕರ್ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.