ADVERTISEMENT

ಗುಬ್ಬಿಯಲ್ಲಿ ರಾಷ್ಟಧ್ವಜಕ್ಕೆ ಅಪಮಾನ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 15:44 IST
Last Updated 26 ಜನವರಿ 2023, 15:44 IST

ಗುಬ್ಬಿ: ರಾಷ್ಟ್ರಧ್ವಜವನ್ನು ಗುರುವಾರ ರಾತ್ರಿ 7.30 ಗಂಟೆಯಾದರೂ ಗುಬ್ಬಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೆಳಗೆ ಇಳಿಸಿಲ್ಲ.
ಗುರುವಾರ ಬೆಳಿಗ್ಗೆ ಗಣರಾಜ್ಯೋತ್ಸವದ ಅಂಗವಾಗಿ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ಮಾಡಲಾಗಿತ್ತು. ರಾಷ್ಟ್ರಧ್ವಜವನ್ನು ನಿಯಮಾನುಸಾರ ಸೂರ್ಯಾಸ್ತಕ್ಕೆ ಮುಂಚೆ ಇಳಿಸದೆ ಇರುವುದನ್ನು ಗಮನಿಸಿದ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿದು ಮಾಧ್ಯಮದವರು ಸ್ಥಳಕ್ಕೆ ಆಗಮಿಸಿದ ನಂತರ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಬಂದು ಆತುರದಲ್ಲಿ ಕೆಳಗೆ ಇಳಿಸಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದು ದೇಶದ್ರೋಹ ಪ್ರಕರಣವಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ನಿಯಮಾನುಸಾರ ಸೂರ್ಯಸ್ತಕ್ಕೆ ಮುಂಚೆ ರಾಷ್ಟ್ರಧ್ವಜವನ್ನು ಕೆಳಗೆ ಇಳಿಸದೆ ಕರ್ತವ್ಯ ಲೋಪ ಎಸಗಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ADVERTISEMENT

ಈ ವಿಚಾರ ಗಮನಕ್ಕೆ ಬಂದಿದ್ದು, ಕಾನೂನು ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಂಬಂಧಿಸಿದವರ ಮೇಲೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಪೊಲೀಸರುಗೆ ಸೂಚಿಸಿದ್ದೇನೆ ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.