ADVERTISEMENT

ಯೋಗ ಶಿಬಿರ | ಆರೋಗ್ಯ ಕಾಪಾಡಿಕೊಂಡವರು ನಿಜವಾದ ಶ್ರೀಮಂತರು: ಸಿದ್ಧಲಿಂಗ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2023, 2:17 IST
Last Updated 21 ಜೂನ್ 2023, 2:17 IST
ಸಿದ್ಧಗಂಗಾ ಮಠದಲ್ಲಿ ಯೋಗ ಶಿಬಿರ
ಸಿದ್ಧಗಂಗಾ ಮಠದಲ್ಲಿ ಯೋಗ ಶಿಬಿರ    

ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಬುಧವಾರ ಬೆಳಿಗ್ಗೆ ಆಯುಷ್ ಇಲಾಖೆ ಮತ್ತು ಜಿಲ್ಲಾ ಆಡಳಿತದಿಂದ ವಿಶ್ವ ಯೋಗ ದಿನದ ದಿನ ಪ್ರಯುಕ್ತ ಯೋಗ ಶಿಬಿರ ಆಯೋಜಿಸಲಾಗಿತ್ತು.

ಉಪವಿಭಾಗಾಧಿಕಾರಿ ಹೋಟೆಲ್ ಶಿವಪ್ಪ ಶಿಬಿರ ಉದ್ಘಾಟಿಸಿದರು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಮನುಷ್ಯನ ಜೀವನದಲ್ಲಿ ಆರೋಗ್ಯ ತುಂಬಾ ಮುಖ್ಯ. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಅತ್ಯಂತ ಅವಶ್ಯಕ ಎಂದು ಹೇಳಿದರು.

ADVERTISEMENT

ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು. ಹಣ- ಅಂತಸ್ತು ಇದ್ದವರು ಶ್ರೀಮಂತರಲ್ಲ, ದೈಹಿಕ, ಮಾನಸಿಕ ಆರೋಗ್ಯ ಇದ್ದವರು ನಿಜವಾದ ಶ್ರೀಮಂತರು ಎಂದರು.

ಎಲ್ಲರು ಉತ್ತಮ ಆರೋಗ್ಯ ಬೇಕು ಎನ್ನುತ್ತಾರೆ. ಆದರೆ ಯಾರೂ ಕೂಡ ಆರೋಗ್ಯದ ಸೂತ್ರಗಳನ್ನು ಪಾಲನೆ ಮಾಡುತ್ತಿಲ್ಲ. ಶಿಸ್ತು ಬದ್ಧ ಜೀವನದಿಂದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು‌.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಠದ ನೂರಾರು ಮಕ್ಕಳು ಯೋಗ ಮಾಡಿದರು. ತಹಶೀಲ್ದಾರ್ ಸಿದ್ದೇಶ್, ಡಿಡಿಪಿಐ ಸಿ.ನಂಜಯ್ಯ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.