ADVERTISEMENT

ತುಮಕೂರು | ಹೂಡಿಕೆ ಆಮಿಷ: ಹೋಟೆಲ್‌ ಸಿಬ್ಬಂದಿಗೆ ₹14 ಲಕ್ಷ ವಂಚನೆ

ಷೇರು ಮಾರುಕಟ್ಟಿಯಲ್ಲಿ ಹಣ ಹೂಡಿಕೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 6:31 IST
Last Updated 17 ನವೆಂಬರ್ 2025, 6:31 IST
ಸೈಬರ್ ಅಪರಾಧ
ಸೈಬರ್ ಅಪರಾಧ   

ತುಮಕೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ತಿಪಟೂರು ತಾಲ್ಲೂಕಿನ ಕೋಡಿಹಳ್ಳಿಯ ಹೋಟೆಲ್‌ ಸಿಬ್ಬಂದಿ ಎಚ್‌.ಎಸ್‌.ಶಿವಕುಮಾರ್‌ ₹14 ಲಕ್ಷ ಕಳೆದುಕೊಂಡಿದ್ದಾರೆ.

ಆನ್‌ಲೈನ್‌ನಲ್ಲಿ ಕೆಲಸ ಮಾಡುತ್ತಾ ಹಣ ಗಳಿಸಬಹುದು ಎಂಬ ಜಾಹೀರಾತು ವೀಕ್ಷಿಸಿದ್ದಾರೆ. ನಂತರ ಯಾವ ಕೆಲಸ ಎಂದು ಮಸೇಜ್‌ ಮಾಡಿದ್ದಾರೆ. ಬಳಿಕ ಅವರ ನಂಬರ್‌ ಅನ್ನು ‘Wealth Group 605’ ಎಂಬ ವಾಟ್ಸ್‌ ಆ್ಯಪ್‌ ಗ್ರೂಪ್‌ಗೆ ಸೇರಿಸಲಾಗಿದೆ. ‘ನಾವು ಹೇಳಿದಂತೆ ಹಣ ವರ್ಗಾಯಿಸಿದರೆ, ಅದನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಿಮಗೆ ಲಾಭ ನೀಡುತ್ತೇವೆ’ ಎಂದು ಆರೋಪಿಗಳು ತಿಳಿಸಿದ್ದಾರೆ.

ವಂಚಕರ ಮಾತು ನಂಬಿದ ಶಿವಕುಮಾರ್‌ ಹಂತ ಹಂತವಾಗಿ ಒಟ್ಟು ₹14.08 ಲಕ್ಷ ವರ್ಗಾವಣೆ ಮಾಡಿದ್ದಾರೆ. ಹಣ ವಾಪಸ್‌ ಕೇಳಿದಾಗ ‘ಇನ್ನೂ ₹14 ಲಕ್ಷ ವರ್ಗಾಯಿಸಿದರೆ ಮಾತ್ರ ಪೂರ್ತಿ ಹಣ ನೀಡಲಾಗುವುದು’ ಎಂದಿದ್ದಾರೆ. ಅನುಮಾನ ಬಂದು ಸ್ನೇಹಿತರ ಬಳಿ ವಿಚಾರಿಸಿದಾಗ ಮೋಸ ಆಗಿರುವುದು ಗೊತ್ತಾಗಿದೆ.

ADVERTISEMENT

ಆಮಿಷ ನೀಡಿ, ವಿವಿಧ ಖಾತೆಗಳಿಗೆ ಹಣ ಹಾಕಿಸಿಕೊಂಡು ಮೋಸ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೈಬರ್‌ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.