ತುರುವೇಕೆರೆ: ಚಂದ್ರಯಾನ ಯಶಸ್ವಿಗೊಳಿಸಿದ ದೇಶದ ವಿಜ್ಞಾನಿಗಳ ಸಾಧನೆ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅದೇ ಪಥದಲ್ಲಿ ವಿದ್ಯಾರ್ಥಿಗಳು ಸಾಗಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ನೀಡಿದರು.
ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿರುವ ಪ್ರಿಯಾ ಪ್ರೌಢ ಶಾಲೆಯಲ್ಲಿ ನಡೆದ ಇಸ್ರೊ ವಿಜ್ಞಾನಿಗೆ ಸತ್ಕಾರ ಹಾಗೂ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ದೇಶದ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ನಾಸಾವನ್ನೂ ಮೀರಿಸಿ ಬೆಳೆದು ನಿಂತಿದ್ದಾರೆ. ಎಲ್ಲ ಕ್ಷೇತ್ರದಲ್ಲೂ ಸ್ವಾವಲಂಬನೆ ಸಾಧಿಸಲಾಗಿದೆ ಎಂದು ಶ್ಲಾಘಿಸಿದರು.
ಇಸ್ರೊ ವಿಜ್ಞಾನಿ ಟಿ.ಸುಬ್ರಮಣ್ಯಂ ಗಣೇಶ್ ದಂಪತಿ, ಶಾಸಕ ಎಂ.ಟಿ. ಕೃಷ್ಣಪ್ಪ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಸನ್ಮಾನಿಸಲಾಯಿತು. ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬಿಇಒ ಎನ್.ಸೋಮಶೇಖರ್, ಶಾಲೆ ಸಂಸ್ಥಾಪಕ ಎಂ.ಎನ್.ಚಂದ್ರೇಗೌಡ, ಕಾರ್ಯದರ್ಶಿ ಪುಷ್ಪಲತಾ, ಜಂಟಿ ಕಾರ್ಯದರ್ಶಿ ಚೇತನ್ ಸಿ., ಎಪಿಎಂಸಿ ಮಾಜಿ ಅಧ್ಯಕ್ಷ ಮಂಗಿಕುಪ್ಪೆ ಬಸವರಾಜು, ಶಿಕ್ಷಕರು, ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.