ADVERTISEMENT

ಪ್ರತಿ ತಾಲ್ಲೂಕಿನಲ್ಲಿ ಕ್ರೀಡಾಶಾಲೆ ಪ್ರಾರಂಭ ಅಗತ್ಯ: ಎನ್.ಮಹಾಲಿಂಗೇಶ್

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2023, 13:31 IST
Last Updated 25 ಆಗಸ್ಟ್ 2023, 13:31 IST
ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕುಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎನ್.ಮಹಾಲಿಂಗೇಶ್ ಕ್ರೀಡಾಜ್ಯೋತಿ ಸ್ವೀಕರಿಸಿದರು
ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕುಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎನ್.ಮಹಾಲಿಂಗೇಶ್ ಕ್ರೀಡಾಜ್ಯೋತಿ ಸ್ವೀಕರಿಸಿದರು   

ಮಧುಗಿರಿ: ಗ್ರಾಮೀಣ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಇದ್ದರೂ ರಾಜ್ಯ, ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎನ್.ಮಹಾಲಿಂಗೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.

ರಾಜ್ಯದ ಪ್ರತಿ ತಾಲ್ಲೂಕುಗಳಲ್ಲಿ ಕ್ರೀಡಾ ಶಾಲೆಗಳನ್ನು ಸರ್ಕಾರ ಅನುಷ್ಠಾನ ಮಾಡುವುದರ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದರು.

ADVERTISEMENT

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಿ.ಎಂ.ಮುನೀಂದ್ರ ಕುಮಾರ್ ಮಾತನಾಡಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವಿಕಸನಕ್ಕೆ ಪೂರಕ ವಾತವರಣ ಸೃಷ್ಟಿಸುತ್ತವೆ. ಕ್ರೀಡೆಗಳಲ್ಲಿ ಭಾಗವಹಿಸುವವರು ದೈಹಿಕ, ಮಾನಸಿಕವಾಗಿ ಸದೃಢರಾಗಿರಬೇಕು. ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದರಿಂದ ಮಾನಸಿಕ ನೆಮ್ಮದಿ ಕಾಣಬಹುದಾಗಿದ್ದು, ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಂಶುಪಾಲ ರಂಗಪ್ಪ, ಎಂ.ಜಿ.ಆಶ್ವತ್ಥನಾರಾಯಣ, ಎಂ.ಕೆ.ಲತಾ, ಕೆ.ಎಂ.ಕೃಷ್ಣಮೂರ್ತಿ, ರಶ್ಮಿಭಟ್, ಎ.ರಾಮಚಂದ್ರಪ್ಪ, ಕಸಾಪ ಅಧ್ಯಕ್ಷೆ ಸಹನಾ ನಾಗೇಶ್, ಗೌರವ ಕಾರ್ಯದರ್ಶಿ ರಂಗಾಧಾಮಯ್ಯ, ವೀಣಾ, ಶಿಕ್ಷಕ ಲಕ್ಷ್ಮೀರಂಗಯ್ಯ, ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಫೌಂಡೇಶನ್ ಕಾರ್ಯದರ್ಶಿ ಜಿ.ಆರ್.ರಮೇಶ್ ಹಾಗೂ ಕ್ರೀಡಾಪಟುಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.