ತುಮಕೂರು: ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ವಿವಿಧ ಯೋಜನೆಗಳಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳಿಗೆ ಒಂದು ವಾರದಲ್ಲಿ ಸಮಯ ವಿಸ್ತರಣೆ ಕೋರಿ (ಇಒಟಿ) ಪ್ರಸ್ತಾವ ಸಲ್ಲಿಸಿ, ಅನುಮೋದನೆ ಪಡೆಯುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿ ವೇಳಾಪಟ್ಟಿ, ಕಾಮಗಾರಿ ಕಾಲಾವಧಿ, ವಿಸ್ತರಣೆ ಪ್ರಸ್ತಾವ, ಬಿಲ್ ಪಾವತಿ ದಾಖಲೆಗಳು ಹಾಗೂ ಬಾಕಿ ಇರುವ ಕಾಮಗಾರಿಗಳ ಭೌತಿಕ ಪ್ರಗತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಕಾರ್ಯಯೋಜನೆ ರೂಪಿಸಬೇಕು. ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.
ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಸಹಿಸುವುದಿಲ್ಲ. ಎಲ್ಲ ದಾಖಲೆಗಳು ನಿಖರ ಹಾಗೂ ಸಂಪೂರ್ಣವಾಗಿರಬೇಕು. ಶಿಸ್ತು ಬದ್ಧವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ಎಂಜಿನಿಯರ್, ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.