ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿ ಹೊನ್ನಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಜರುಗಿತು.
ಉಪನ್ಯಾಸಕಿ ಡಾ.ರಾಧಾ ಕೆ.ಎಂ ಮಾತನಾಡಿ ಜಾನಪದ ಸಾಹಿತ್ಯ, ಕಲೆ, ಸಂಗೀತ, ಸಂಸ್ಕೃತಿ ಇವೆಲ್ಲವನ್ನೂ ಸಹ ಉಳಿಸಿ ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಕೆಲಸವನ್ನು ಚಾಚೂ ತಪ್ಪದೇ ಮಾಡಬೇಕೆಂದು ತಿಳಿಸಿದರು.
ಸುವರ್ಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗಂಗಾಧರ ಗೌಡ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ಯದನಂದನ್ ಎಂ.ಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಧ್ಯಾಪಕರು, ಅಧ್ಯಾಪಕೇತರ ವರ್ಗ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ.ನಾಗೇಂದ್ರಪ್ಪ ಸ್ವಾಗತಿಸಿ, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಡಾ.ವಸಂತ ಕುಮಾರಿ ನಿರೂಪಿಸಿ, ಗಿರೀಶ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.