ಜೆಡಿಎಸ್
ಪಾವಗಡ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜೂನ್ 17ರಂದು ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎ.ಈರಣ್ಣ ತಿಳಿಸಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೂನ್ 17ರಂದು ಮಧ್ಯಾಹ್ನ ಅಂಜನಶೆಟ್ಟಿ ಕಲ್ಯಾಣ ಮಂಟಪದ ಬಳಿ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ. 2 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ ಎಂದರು.
ಪ್ರಧಾನ ಕಾರ್ಯದರ್ಶಿ ಸೊಗಡು ವಿ.ವೆಂಕಟೇಶ್, ಪಕ್ಷವನ್ನು ಜನರ ಬಳಿ ಕೊಂಡೊಯ್ಯುವ ಉದ್ದೇಶದಿಂದ ಆಂದೋಲನ ನಡೆಸಲಾಗುತ್ತಿದೆ. ಮಿಸ್ಟ್‌ಕಾಲ್ ಅಭಿಯಾನಕ್ಕೆ ಚಾಲನೆ ನೀಡಿ ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚಿಸಲಿದ್ದಾರೆ ಎಂದರು.
ಜೆಡಿಎಸ್ ಗೌರವ ಅಧ್ಯಕ್ಷ ರಾಜಶೇಖರಪ್ಪ, ಬಲರಾಮರೆಡ್ಡಿ, ಶಿವಕುಮಾರ್, ಭರತ್ ಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.