ADVERTISEMENT

ಜಯಚಂದ್ರ ಗೆಲುವು ಖಚಿತ: ಕೆ.ಎನ್.ರಾಜಣ್ಣ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 16:42 IST
Last Updated 18 ಅಕ್ಟೋಬರ್ 2020, 16:42 IST
ಮಧುಗಿರಿ ಪಟ್ಟಣದ ವಾಸವಿ ವಿವಿದೊದ್ದೇಶ ಸಹಕಾರಿ ಬ್ಯಾಂಕ್‍ನ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಜಿಲ್ಲಾ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರನ್ನು ಸನ್ಮಾನಿಸಲಾಯಿತು
ಮಧುಗಿರಿ ಪಟ್ಟಣದ ವಾಸವಿ ವಿವಿದೊದ್ದೇಶ ಸಹಕಾರಿ ಬ್ಯಾಂಕ್‍ನ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಜಿಲ್ಲಾ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರನ್ನು ಸನ್ಮಾನಿಸಲಾಯಿತು   

ಮಧುಗಿರಿ: ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಗೆಲುವು ಖಚಿತ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದ ವಾಸವಿ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಎಂದಿಗೂ ಜಾತಿ ಆಧಾರದ ಮೇಲೆ ಮತ ಕೇಳುವುದಿಲ್ಲ. ಅಭಿವೃದ್ಧಿ ಆಧಾರದಲ್ಲಿ ಮತ ಕೇಳುತ್ತವೆ. ಜಯಚಂದ್ರ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ADVERTISEMENT

ಆಗ್ನೇಯ ಪಧವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಅವರು ನಮ್ಮ ಜಿಲ್ಲೆಯವರೇ ಆಗಿದ್ದು, ಉತ್ತಮ ಹಿನ್ನಲೆವುಳ್ಳವರಾಗಿದ್ದಾರೆ. ಅವರ ಗೆಲುವಿಗೆ ಕಾಂಗ್ರೆಸ್ ಮುಖಂಡರು ಕೈಜೋಡಿಸಬೇಕು ಎಂದರು.

ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡದ ತಿಮ್ಮರಾಜು ಆಯ್ಕೆಯಾಗುವುದು ಬಹುತೇಕ ಖಚಿತ. ಉಪಾಧ್ಯಕ್ಷ ಸ್ಥಾನಕ್ಕೆ ಆರ್ಯವೈಶ್ಯ ಸಮುದಾಯದವರನ್ನು ಆಯ್ಕೆ ಮಾಡಲು ಎಲ್ಲಾ ಸದಸ್ಯರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ರಾಜ್ಯ ಆರ್ಯವೈಶ್ಯ ಕೊ ಅಪರೇಟಿವ್ ಬ್ಯಾಂಕ್ ಮತ್ತು ಸೊಸ್ಶೆಟಿ ಅಧ್ಯಕ್ಷ ಎನ್.ಎಸ್.ಜಯಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಜೆ.ರಾಜಣ್ಣ, ಬ್ಯಾಂಕ್‍ ಅಧ್ಯಕ್ಷ ಎ.ರಮೇಶ್, ಪದಾಧಿಕಾರಿಗಳಾದ ಕೆ.ಎಂ.ವಿಕ್ರಂ, ಎಂ.ಕೆ.ನಾಗರಾಜು, ಟಿ.ಎನ್.ಪಾರ್ಥಸಾರಥಿ, ಕೆ.ಎನ್.ಸುರೇಂದ್ರ ನಾಥ್, ಕೆ.ಸಿ.ಅಶ್ವತ್ಥನಾರಾಯಣ ಶೆಟ್ಟಿ, ಟಿ.ಎಸ್.ಅನುಷಾ ಬದ್ರಿನಾಥ್, ರೂಪಾರವಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಸದಸ್ಯರಾದ ತಿಮ್ಮರಾಜು, ಲಾಲಾಪೇಟ್ ಮಂಜುನಾಥ್, ಎಂ.ವಿ.ಮಂಜುನಾಥ್, ರಾಧಿಕಾ ಆನಂದ ಕೃಷ್ಣ, ಮಾಜಿ ಸದಸ್ಯ ಎಂ.ಎಸ್.ಶಂಕರನಾರಾಯಣ್, ಎಂ.ಎಸ್.ರಘುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.