ADVERTISEMENT

ತುಮಕೂರು: ಗೋ ಬ್ಯಾಕ್ ಸೋಮಣ್ಣ ಘೋಷಣೆ ಕೂಗಿ ಮಾಧುಸ್ವಾಮಿ ಬೆಂಬಲಿಗರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2024, 13:35 IST
Last Updated 10 ಮಾರ್ಚ್ 2024, 13:35 IST
   

ತಿಪಟೂರು: ತುಮಕೂರು ಜಿಲ್ಲೆಯ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್‍ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಗೆ ನೀಡುವಂತೆ ಆಗ್ರಹಿಸಿ ತಿಪಟೂರು ಸೇರಿದಂತೆ ನಾಲ್ಕು ತಾಲ್ಲೂಕುಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ ‘ಗೋ ಬ್ಯಾಕ್ ವಿ.ಸೋಮಣ್ಣ’ ಘೋಷಣೆ ಕೂಗಿದ ಘಟನೆ ಭಾನುವಾರ ನಡೆಯಿತು.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್‍ನಲ್ಲಿ ಭಾನುವಾರ ಮಧ್ಯಾಹ್ನ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ ತಾಲ್ಲೂಕಿನ ಬಿಜೆಪಿ ಮುಖಂಡರು, ಕಾರ್ಯಕರ್ತರು, ಜೆ.ಸಿ.ಮಾಧುಸ್ವಾಮಿ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸಿ ಜೆ.ಸಿ.ಮಾಧುಸ್ವಾಮಿಗೆ ತುಮಕೂರು ಟಿಕೆಟ್ ನೀಡುವಂತೆ ಆಗ್ರಹಿಸಿದರು.

ಸಂಸದ ಎಂ.ಪಿ.ಬಸವರಾಜು ಹಾಗೂ ವಿ.ಸೋಮಣ್ಣ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ನಂತರದಲ್ಲಿ ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು. ಇನ್ನೂ ಅಭಿಮಾನಿ ಚೇತನ್ ಎಂಬಾತ ಪೆಟ್ರೋಲ್ ತೆಗೆದುಕೊಂಡು ಬಂದು ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದು ಪೊಲೀಸರು, ಜೆಸಿಎಂ ಬೆಂಬಲಿಗರ ಸಹಕಾರದೊಂದಿಗೆ ತಡೆದರು. ಕೆಲ ನಿಮಿಷಗಳ ಕಾಲ ರಾಷ್ಟ್ರೀಯ ಹೆದ್ದಾರಿ 206ರನ್ನು ಬಂದ್ ಮಾಡಿ ಜೆಸಿಎಂ ಅಭಿಮಾನಿಗಳು ಆಕ್ರೋಶ ಹೊರಹಾಕಿದರು.

ADVERTISEMENT

ತಿಪಟೂರು ನಗರಸಭೆ ಮಾಜಿ ಸದಸ್ಯ ಪ್ರಸನ್ನ ಕುಮಾರ್ ಮಾತನಾಡಿ ತುಮಕೂರು ಜಿಲ್ಲೆಗೆ ಜೆ.ಸಸಿ.ಮಧುಸ್ವಾಮಿ ಕೊಡುಗೆ ಅಪಾರವಾಗಿದ್ದು, ಜಿಲ್ಲೆಗೆ ನೀರಾರವರಿ ಹರಿಕಾರ ಎಂದರೆ ತಪ್ಪಾಗಲಾರದು. ಜಿಲ್ಲಾ ಉಸ್ತವಾರಿ ಸಚಿವರಾಗಿದ್ದ ಕಾರಲದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ತುಮಕೂರು ಜಿಲ್ಲೆಯನ್ನು ಸಂಪೂರ್ಣ ಅರಿತಿದ್ದು ಸ್ಥಳೀಯರಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರಿಗೆ, ಜನಸಮಾನ್ಯರಿಗೆ ಅನುಕೂಲವಾಗುತ್ತದೆ. ಜಿಲ್ಲೆಯ ಹೊರತಾಗಿ ಬಂದು ಚುನಾವಣೆ ನಿಂತವರು ಯಾರೂ ಇಲ್ಲಿಯವರೆವಿಗೂ ಗೆದ್ದಿರುವ ಉದಾಹಣೆಯೇ ಇಲ್ಲ. ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಗೆ ಭಾರತ ರತ್ನ ಕೊಡಿಸುವ ನಿಲ್ಲಿನಲ್ಲಿಯೂ ಹೋರಾಟ ಮಾಡಲು ಅನುಕೂಲವಾಗುತ್ತದೆ. ಅಲ್ಲದೇ ತಿಪಟೂರು ತಾಲ್ಲೂಕಿನಿಂದ ಹೆಚ್ಚಿನ ಮತಗಳನ್ನು ನೀಡುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.