ADVERTISEMENT

ನಾಗವಲ್ಲಿ ಕೃಷಿ ಸಹಕಾರ ಸಂಘ ಜೆಡಿಎಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 15:30 IST
Last Updated 14 ಫೆಬ್ರುವರಿ 2020, 15:30 IST
ತುಮಕೂರು ತಾಲ್ಲೂಕಿನ ನಾಗವಲ್ಲಿ ಕೃಷಿ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಗ್ರಾಮಾಂತರ ಶಾಸಕ ಗೌರಿಶಂಕರ್ ಅಭಿನಂದಿಸಿದರು.
ತುಮಕೂರು ತಾಲ್ಲೂಕಿನ ನಾಗವಲ್ಲಿ ಕೃಷಿ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಗ್ರಾಮಾಂತರ ಶಾಸಕ ಗೌರಿಶಂಕರ್ ಅಭಿನಂದಿಸಿದರು.   

ತುಮಕೂರು: ತಾಲ್ಲೂಕಿನ ನಾಗವಲ್ಲಿ ಕೃಷಿ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಗ್ರಾಮಾಂತರ ಶಾಸಕ ಗೌರಿಶಂಕರ್ ಅಭಿನಂದಿಸಿದರು.

11 ಸದಸ್ಯ ಬಲದ ನಾಗವಲ್ಲಿ ಕೃಷಿ ಸಹಕಾರಕ್ಕೆ 8 ಮಂದಿ ಜೆಡಿಎಸ್ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, 3 ಜನ ಇತರೆ ಸದಸ್ಯರು ಸಂಘಕ್ಕೆ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗಂಗಣ್ಣ ಹಾಗೂ ಉಪಾಧ್ಯಕ್ಷರಾಗಿ ಮೂಡಲಗಿರಿಯಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಶಾಸಕ ಗೌರಿಶಂಕರ್ ಮಾತನಾಡಿ, ‘ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷ ಸಂಘಟನೆಯ ದೃಷ್ಟಿಯಲ್ಲಿ ದೊರೆತಿರುವ ಈ ಗೆಲುವನ್ನು ನೂತನ ಸದಸ್ಯರು ರೈತರ ಕಲ್ಯಾಣಕ್ಕಾಗಿ ಬಳಸಬೇಕು. ನೇರವಾಗಿ ರೈತರೊಂದಿಗೆ ಸಂಪರ್ಕವಿರುವ ಕೃಷಿ ಸಹಕಾರಿ ಸಂಘವನ್ನು ಪರಿಣಾಮಕಾರಿಯಾಗಿ ಬಳಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ದೀಪಕ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹನುಮಂತರಾಜು, ಎಪಿಎಂಸಿ ಮಾಜಿ ಸದಸ್ಯ ಗೋಪಾಲಯ್ಯ, ಗ್ರಾಮ ಪಂಚಾಯಿತಿ ಸದಸ್ಯೆ ನಾಗರತ್ನಮ್ಮ, ನಾಗವಲ್ಲಿ ರಾಮಣ್ಣ, ವಿನಯ್, ಮಂಜು, ಶಶಿಧರ್, ವಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.