ADVERTISEMENT

ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 4:12 IST
Last Updated 11 ಸೆಪ್ಟೆಂಬರ್ 2025, 4:12 IST
ಪಾವಗಡ ವಿವಿಧ ಬಡಾವಣೆಗಳ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲ್ಲೂಕು ಘಟಕದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಅವರಿಗೆ ಬುಧವಾರ ಮನವಿಪತ್ರ ನೀಡಿದರು.
ಪಾವಗಡ ವಿವಿಧ ಬಡಾವಣೆಗಳ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲ್ಲೂಕು ಘಟಕದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಅವರಿಗೆ ಬುಧವಾರ ಮನವಿಪತ್ರ ನೀಡಿದರು.   

ಪಾವಗಡ: ಪಟ್ಟಣದ ವಿವಿಧ ಬಡಾವಣೆಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲ್ಲೂಕು ಘಟಕದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಅವರಿಗೆ ಬುಧವಾರ ಮನವಿಪತ್ರ ಸಲ್ಲಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಮಾತನಾಡಿ, ಪಟ್ಟಣದ ಹಳೆಯ ಊರಿನಲ್ಲಿ ಹತ್ತು ದಿನಗಳಾದರೂ ನೀರು ಪೂರೈಸುತ್ತಿಲ್ಲ. ಪಟ್ಟಣದ 23 ವಾರ್ಡ್‌ಗಳಲ್ಲಿ ಜೆಜೆಎಂ  ಪೈಪ್‌ಲೈನ್ ಕಾಮಗಾರಿ ಮಾಡಿ ರಸ್ತೆ ಸಂಪೂರ್ಣವಾಗಿ ಹಾಳುಗೆಡವಲಾಗಿದೆ. ಪಟ್ಟಣದ ಪ್ರಮುಖ ಮುಖ್ಯ ರಸ್ತೆಗಳಲ್ಲಿ ಸರಿಯಾದ ಬೀದಿ ದೀಪದ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು.

ಪಟ್ಟಣದ ಆಪ್‌ ಬಂಡೆ, ಕನುಮಲ ಚೆರಲು ನಿವಾಸಿಗಳು ಬಂಡೆಗಳ ಮೇಲೆ ಮನೆ ನಿರ್ಮಿಸಿಕೊಂಡಿದ್ದು, ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಕುಡಿಯುವ ನೀರು, ಚರಂಡಿ, ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ತೀವ್ರ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿದರು.

ADVERTISEMENT

ನೀರಿನ ಸಂಪರ್ಕ ಇಲ್ಲದ ಬಡಾವಣೆಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು. ಕುಮಾರಸ್ವಾಮಿ ಬಡಾವಣೆಯ ಹೆಸರು ಬದಲಿಸುವ ನಿರ್ಧಾರ ಕೈಬಿಡಬೇಕು. ಚರಂಡಿ, ಬೀದಿ ದೀಪ, ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಪುರಸಭೆ ಮಾಜಿ ಸದಸ್ಯ ಮನುಮಹೇಶ್, ಕಾವಾಲಗೆರೆ ರಾಮಾಂಜಿ, ಮಣಿ, ಮಂಜುನಾಥ್, ಗಂಗಾಧರ್ ನಾಯ್ಡು, ಗೋವಿಂದಬಾಬು, ದೇವರಾಜು, ನಾನಿ, ಯುನುಸ್, ಈರಣ್ಣ ಗೌಡ, ಈರಣ್ಣ, ಮೂರ್ತಿ, ನಟರಾಜ್, ಆಪ್‌ ಬಂಡೆ ಗೋಪಾಲ್, ಗಗನ್, ಯುನುಸ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.