ADVERTISEMENT

ನ್ಯಾಯಾಂಗದಲ್ಲಿ ಕನ್ನಡ ಬಳಕೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 3:10 IST
Last Updated 27 ಫೆಬ್ರುವರಿ 2021, 3:10 IST
ನ್ಯಾಯಾಂಗದಲ್ಲಿ ಕನ್ನಡ ಬಳಕೆಗೆ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು ಒತ್ತಾಯಿಸಿದರು
ನ್ಯಾಯಾಂಗದಲ್ಲಿ ಕನ್ನಡ ಬಳಕೆಗೆ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು ಒತ್ತಾಯಿಸಿದರು   

ತುರುವೇಕೆರೆ: ರಾಜ್ಯದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕನ್ನಡ ಭಾಷೆ ಬಳಸಬೇಕು ಎಂದು ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ವಕೀಲರ ಸಂಘ, ಜಯಕರ್ನಾಟಕ ಜನಪರ ವೇದಿಕೆ, ಆಟೊಚಾಲಕರ ಸಂಘ, ಬೀದಿ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ಹಾಗೂ ಹಿರಿಯ ಶ್ರೇಣಿ ನಾಗರಿಕ ನ್ಯಾಯಾಲಯ ಸಂಕೀರ್ಣದಲ್ಲಿ ಶುಕ್ರವಾರ ಅಭಿಯಾನ ನಡೆಸಿ ಶಿರಸ್ತೇದಾರ್ ಗಂಗಾಧರ್ ಮತ್ತು ಬಸವರಾಜ್ ಓಲೇಕಾರ್ ಅವರಿಗೆ ಹಕ್ಕೊತ್ತಾಯದ ಮನವಿ ಪತ್ರ ಸಲ್ಲಿಸಿದರು.

ಕಸಾಪ ತಾಲ್ಲೂಕು ಅಧ್ಯಕ್ಷ ನಂ.ರಾಜುಮುನಿಯೂರು, ನಿಕಟ ಪೂರ್ವ ಅಧ್ಯಕ್ಷ ಸಾ.ಶಿ.ದೇವರಾಜ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ‘ನ್ಯಾಯಾಂಗದ ಕನ್ನಡ ಪ್ರಶಸ್ತಿ’ ಪುರಸ್ಕೃತ ವಕೀಲ ಎಸ್.ಕೆ.ಉಮೇಶ್, ಜಯಕರ್ನಾಟಕ ಜನಪರ ವೇದಿಕೆ ಗೌರವಾಧ್ಯಕ್ಷ ಮಲ್ಲಿಕಾರ್ಜುನ್, ಅಧ್ಯಕ್ಷ ಎಚ್.ಎಸ್.ವೆಂಕಟೇಶ್, ಯುವ ಘಟಕದ ಅಧ್ಯಕ್ಷ ಆಕಾಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕೆ.ಆರ್. ಗಾಯತ್ರೀದೇವಿ ಅರಸ್, ಸಂಘಟನಾ ಕಾರ್ಯದರ್ಶಿ ಟಿ.ಆರ್.ಧನಂಜಯ್, ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಟಿ.ಎನ್. ಮಾರುತಿ, ಆಟೊ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ, ದಿನೇಶ್, ಶಿವಕುಮಾರ್ ಮುಂಬೈ, ಸಮಿತಿ ಸದಸ್ಯರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.