ತಿಪಟೂರು: ಕಾಡಗೊಲ್ಲ ಜಾತಿ ಪ್ರಮಾಣ ಪತ್ರ ನೀಡುವುದರಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದು, ಶ್ರೀಘ್ರ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸಿ ಕಾಡುಗೊಲ್ಲ ಸಂಘದಿಂದ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಕಾಡುಗೊಲ್ಲ ನಿಗಮದಿಂದ ಹಲವು ಯೋಜನೆಗಳನ್ನು ಪಡೆಯಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಮೇ 10ರಿಂದ 15ರವರೆಗೆ ಅವಕಾಶವಿದೆ. ಆದ್ದರಿಂದ ಈಗಾಗಲೇ ಜಾತಿ ಪ್ರಮಾಣ ಪತ್ರಗಳನ್ನು ಪಡೆಯಲು ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕಾಲ ವಿಳಂಬ ನೀಡಿ ಪ್ರಮಾಣ ಪತ್ರಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ನೀಡಬೇಕು. ತಾಲ್ಲೂಕಿನ ಕೆಲವು ಗೊಲ್ಲರಹಟ್ಟಿಗಳಿಗೆ ಸಂಚಾರ ಮಾಡಲು ರಸ್ತೆಗಳನ್ನು ನಿರ್ಮಿಸಬೇಕು ಎಂದು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ತ್ವರಿತವಾಗಿ ರಸ್ತೆ ಕಾಮಗಾರಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ತಾಲ್ಲೂಕು ಅಧ್ಯಕ್ಷ ಬಾಲರಾಜು, ಮುಖಂಡ ಆಯರಹಳ್ಳಿ ಶಂಕರಪ್ಪ, ಉಪಾಧ್ಯಕ್ಷ ಶಂಕರ್, ಜಕ್ಕನಹಳ್ಳಿ ರವೀಂದ್ರ, ಚಂದ್ರಪ್ಪ, ದಿನೇಶ್, ಶಂಕರ್ ಬೋಮ್ಮಾಲಾಪುರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.