ADVERTISEMENT

ಕನ್ನಡ ಉಳಿಸಲು ಪಣ ತೊಡಿ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 3:09 IST
Last Updated 3 ನವೆಂಬರ್ 2020, 3:09 IST
ಕೊರಟಗೆರೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರಿಗೆ ತಾಲ್ಲೂಕುಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೊರಟಗೆರೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರಿಗೆ ತಾಲ್ಲೂಕುಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.   

ಕೊರಟಗೆರೆ: ‘ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ತನ್ನದೇ ಆದ ಮಹತ್ವವಿದೆ. ಕನ್ನಡಿಗರಾದ ನಾವು ಭಾಷೆಯನ್ನು ಉಳಿಸಿ ಬೆಳೆಸಲು ಪಣತೊಡಬೇಕಿದೆ’ ಎಂದು ಶಾಸಕ ಡಾ.ಜಿ. ಪರಮೇಶ್ವರ ಹೇಳಿದರು.

ಪಟ್ಟಣದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಕನ್ನಡ ಕಣ್ಮರೆಯಾಗುತ್ತಿರುವುದು ವಿಷಾದನೀಯ. ಕೇವಲ ನವೆಂಬರ್ ತಿಂಗಳಿಗಷ್ಟೆ ಭಾಷಾ ಪ್ರೀತಿ ಸೀಮಿತವಾಗದೇ ನಿತ್ಯದ ಕಾಯಕವಾಗಬೇಕು. ಪ್ರತಿಯೊಬ್ಬರಿಗೂ ನಾಡು, ನುಡಿ ಬಗ್ಗೆ ಕಾಳಜಿ ಇದ್ದಾಗ ಮಾತ್ರ ಉಳಿಸಲು ಸಾಧ್ಯ ಎಂದರು.

ADVERTISEMENT

ತಹಶೀಲ್ದಾರ್ ಬಿ.ಎಂ. ಗೋವಿಂದರಾಜು, ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಕೀರ್ತನಾ ನಾಯಕ್ ಮಾತನಾಡಿದರು. ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿದ ತಾಲ್ಲೂಕಿನ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರೇಮಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಟಿ.ಸಿ. ರಾಮಯ್ಯ, ಉಪಾಧ್ಯಕ್ಷ ವೆಂಕಟಪ್ಪ, ಸದಸ್ಯೆ ನರಸಮ್ಮ, ಪಟ್ಟಣ ಪಂಚಾಯಿತಿ ಸದಸ್ಯರಾದ ಕೆ.ಆರ್. ಓಬಳರಾಜು, ಎ.ಡಿ. ಬಲರಾಮಯ್ಯ, ನಾಗರಾಜು, ಕಸಾಪ ಅಧ್ಯಕ್ಷ ಹುಲಿಕುಂಟೆ ಮಲ್ಲಿಕಾರ್ಜುನ್, ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಎನ್.ಎ. ಹನುಮಂತರಾಜು, ಮುಖಂಡರಾದ ಎಲ್. ರಾಜಣ್ಣ, ರಾಘವೇಂದ್ರ, ಆಟೊ ಕುಮಾರ್, ಟಿ.ಆರ್. ರಘು, ಎಸ್. ಶಿವಪ್ರಕಾಶ್, ಎನ್.ಎಸ್. ಸುಧಾಕರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.