ADVERTISEMENT

ಡಿ. 21ಕ್ಕೆ ತುಮಕೂರು ಕನ್ನಡಸೇನೆ ಬೆಳ್ಳಿಹಬ್ಬ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 5:18 IST
Last Updated 19 ಡಿಸೆಂಬರ್ 2025, 5:18 IST
<div class="paragraphs"><p>ಕನ್ನಡ</p></div>

ಕನ್ನಡ

   

ತುಮಕೂರು: ಜಿಲ್ಲಾ ಕನ್ನಡಸೇನೆಗೆ 25 ವರ್ಷ ತುಂಬಿದ್ದು, ಇದರ ಅಂಗವಾಗಿ ಬೆಳ್ಳಿಹಬ್ಬ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಡಿ. 21ರಂದು ನಗರದ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ದಿನವಿಡೀ ಕನ್ನಡ ನಾಡುನುಡಿ ಮೆರೆಯುವ ಸಂಭ್ರಮದ ಕನ್ನಡ ಹಬ್ಬವಾಗಿ ಆಚರಿಸಲಾಗುವುದು. ವಿವಿಧ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆ, ಆರೋಗ್ಯ ಶಿಬಿರ, ಅಂಗವಿಕಲರಿಗೆ ಪರಿಕರ ವಿತರಣೆ ಹಮ್ಮಿಕೊಳ್ಳಲಾಗಿದೆ. ವಿವಿಧ ಕ್ಷೇತ್ರಗಳ 25 ಜನರನ್ನು ಸನ್ಮಾನಿಸಲಾಗುತ್ತದೆ ಎಂದು ಕನ್ನಡಸೇನೆ ಅಧ್ಯಕ್ಷ ಧನಿಯಾಕುಮಾರ್ ತಿಳಿಸಿದ್ದಾರೆ.

ADVERTISEMENT

ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆ ವೈದ್ಯರು ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಬೆಳಿಗ್ಗೆ 10ರಿಂದ ಚಿತ್ರಕಲಾ ಸ್ಪರ್ಧೆ, 11ರಿಂದ ರಂಗೋಲಿ ಸ್ಪರ್ಧೆ, ನಂತರ ವಿವಿಧ ಸಾಂಸ್ಕೃತಿಕ, ಮನರಂಜನಾ ಸ್ಪರ್ಧೆಗಳು ನಡೆಯಲಿವೆ. ಕರಾಟೆ ಶಾಲೆ ವಿದ್ಯಾರ್ಥಿಗಳಿಂದ ಕರಾಟೆ ಪ್ರದರ್ಶನವಿರುತ್ತದೆ. ಅಂಗವಿಕಲ ವಿದ್ಯಾರ್ಥಿಗಳಿಗೆ ವ್ಹೀಲ್ ಚೇರ್, ಕಮೋಡ್ ಚೇರ್, ವಾಕರ್, ಊರುಗೋಲು, ಬ್ಲೂಟೂತ್ ಬಾಕ್ಸ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಚಿತ್ರಕಲಾ ಸ್ಪರ್ಧೆಯಲ್ಲಿ ಮೊದಲ ಮೂರು ಸ್ಥಾನ ಪಡೆದವರಿಗೆ ₹5,001, ₹2,001, ₹1,001 ನಗದು ಬಹುಮಾನ ನೀಡಲಾಗುತ್ತದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.