
ತುಮಕೂರು: ಲಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಭಾನುವಾರ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು.
15ಕ್ಕೂ ಹೆಚ್ಚು ರಾಜ್ಯಗಳ ಸುಮಾರು 1,200 ಕರಾಟೆ ಪಟುಗಳು ಭಾಗವಹಿಸಿದ್ದರು. ಸಬ್ ಜೂನಿಯರ್, ಜೂನಿಯರ್ ಮತ್ತು ಸಿನಿಯರ್ ವಿಭಾಗದಲ್ಲಿ ಬಾಲಕ, ಬಾಲಕಿಯರು ಪಂದ್ಯಗಳು ನಡೆದವು.
ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಹನುಮಂತನಾಥ ಸ್ವಾಮೀಜಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ‘ಮಕ್ಕಳಿಗೆ ಶಿಕ್ಷಣದ ಜತೆಗೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು. ಇದರಿಂದ ಮಕ್ಕಳ ಸಮಗ್ರ ವಿಕಾಸ ಸಾಧ್ಯ’ ಎಂದು ಅಭಿಪ್ರಾಯಪಟ್ಟರು.
ಕನ್ನಡ ಸೇನೆಯ ಜಿಲ್ಲಾ ಅಧ್ಯಕ್ಷ ಧನಿಯಾಕುಮಾರ್, ಗುರುಕುಲ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ ಅಧ್ಯಕ್ಷ ಟಿ.ಎಸ್.ಮಧು ಜೈನ್, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್, ಕರಾಟೆ ಡೂ-ಟ್ರೈನಿಂಗ್ ಸ್ಕೂಲ್ ಅಧ್ಯಕ್ಷ ಪ್ರಕಾಶ್, ಲಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ಪ್ರಕಾಶ್, ವೀರಶೈವ ಬ್ಯಾಂಕ್ ಉಪಾಧ್ಯಕ್ಷ ಹೆಬ್ಬಾಕ ಮಲ್ಲಿಕಾರ್ಜುನಯ್ಯ, ಮುಖಂಡರಾದ ಹಿಮಾನಂದನ್, ನೇತಾಜಿ ಶ್ರೀಧರ್, ಬೆಳಗುಂಬ ಮಂಜುನಾಥ್, ಲೋಕೇಶ್ ಆಚಾರ್ಯ, ಟಿ.ಕೆ.ಆನಂದ್ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.