ADVERTISEMENT

ಸಿಎಎ ಪರ ನಿರ್ಣಯಕ್ಕೆ ಸರ್ಕಾರದ ಚಿಂತನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 20:00 IST
Last Updated 17 ಫೆಬ್ರುವರಿ 2020, 20:00 IST
   

ಬೆಂಗಳೂರು: ವಿಧಾನಮಂಡಲದ ಇದೇ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ನಿರ್ಣಯ ಅಂಗೀಕರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಮಾರ್ಚ್‌ 2 ಮತ್ತು 3 ರಂದು ಸಂವಿಧಾನದ ಕುರಿತು ವಿಶೇಷ ಚರ್ಚೆಗೆ ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಪೌರತ್ವ ಕಾಯ್ದೆಯ ತಿದ್ದುಪಡಿ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ಆದ್ದರಿಂದ ರಾಜ್ಯಪಾಲರ ಭಾಷಣದಲ್ಲಿ ಈ ವಿಷಯವನ್ನು ಸರ್ಕಾರ ಪ್ರಸ್ತಾಪಿಸಿಲ್ಲ ಎಂದು ಹಿರಿಯ ಸಚಿವರೊಬ್ಬರು ತಿಳಿಸಿದರು.

ಬಿಜೆಪಿಯೇತರ ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಿರ್ಣಯ ಅಂಗೀಕರಿಸಿವೆ. ಈ ಕಾಯ್ದೆಯನ್ನು ವಿರೋಧಿಸಿ
ದೇಶವ್ಯಾಪಿ ಹೋರಾಟಗಳು ನಡೆಯುತ್ತಿವೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಈ ಹೋರಾಟ ಮುಂದುವರಿದಿದೆ.

ADVERTISEMENT

ಸದನದಲ್ಲಿ ಈ ಕಾಯ್ದೆ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್‌ ಪಕ್ಷ ತಯಾರಿ ನಡೆಸಿಕೊಂಡಿದೆ. ರಾಜ್ಯಪಾಲರ ಭಾಷಣದಲ್ಲಿ ಈ ವಿಷಯವನ್ನು ಉಲ್ಲೇಖಿಸಿದ್ದರೆ ಭಾಷಣಕ್ಕೆ ಅಡ್ಡಿಪಡಿಸಲು ತೀರ್ಮಾನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.