ADVERTISEMENT

ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‌ಗೆ ಹೋಗುತ್ತಾರೆ: ಗೃಹ ಸಚಿವ ಅರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 7:39 IST
Last Updated 26 ಜನವರಿ 2022, 7:39 IST
ಅರಗ ಜ್ಞಾನೇಂದ್ರ
ಅರಗ ಜ್ಞಾನೇಂದ್ರ   

ತುಮಕೂರು: ‘ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‌ಗೆ ಹೋಗುತ್ತಾರೆ. ಬುದ್ಧಿ ನೆಟ್ಟಗೆ ಇರುವವರು ಯಾರೂ ಹೋಗುವುದಿಲ್ಲ’ ಎಂದು ಗೃಹ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಇಲ್ಲಿ ಬುಧವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶದಲ್ಲಿ ನರೇಂದ್ರ ಮೋದಿ ಆಡಳಿತ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸದೃಢವಾಗಿದೆ. ಇಂತಹ ಸಮಯದಲ್ಲಿ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ ವೇತನ ಪರಿಷ್ಕರಣೆ ಸಂಬಂಧ ಔರಾದಕರ್ ವರದಿ ಜಾರಿಮಾಡಲಾಗಿದೆ. ಇದರಿಂದ ಕೆಲವರಿಗೆ ಸರಿಯಾದ ಪ್ರಮಾಣದಲ್ಲಿ ವೇತನ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನ ಇದೆ. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸಿದ್ದು, ಹೆಚ್ಚುವರಿಯಾಗಿ ಭತ್ಯೆ ನೀಡುವ ಮೂಲಕ ವ್ಯತ್ಯಾಸವನ್ನು ಸರಿಪಡಿಸಲಾಗಿದೆ. ರಾಜ್ಯದಲ್ಲಿ ₹200 ಕೋಟಿ ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಪೊಲೀಸರಿಗೆ ಸುಸಜ್ಜಿತವಾದ ಮನೆ, ಠಾಣೆ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.

ADVERTISEMENT

ನಗರದ ಹೊರ ವಲಯದ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಹಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಸಾಕ್ಷಾಧಾರಗಳು ಸಿಗದೆ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.