ADVERTISEMENT

ಸಿ.ಎಂ.ಬದಲಾವಣೆ ಮುನ್ಸೂಚನೆ: ಕೆ.ಎನ್.ರಾಜಣ್ಣ

ಕಾಡುಗೊಲ್ಲ ಅಭಿವೃದ್ಧಿ ನಿಗಮದ ‌ಹೆಸರನ್ನು ಗೊಲ್ಲ ಅಭಿವೃದ್ಧಿ ನಿಗಮ ಎಂದು ಹೆಸರು ಬದಲಿಸುವ ಪ್ರಸ್ತಾಪ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 8:31 IST
Last Updated 19 ನವೆಂಬರ್ 2020, 8:31 IST
ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ
ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ    

ತುಮಕೂರು: ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಉತ್ಸಾಹ ತೋರಿ ಬಿಜೆಪಿ ಹೈಕಮಾಂಡ್‍ ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಇದು ಮುಖ್ಯಮಂತ್ರಿ ಬದಲಾವಣೆಯ ಮುನ್ಸೂಚನೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸುವ ಅಪೇಕ್ಷೆ ಬಿಜೆಪಿಗೆ ಇಲ್ಲ. ಒಂದು ವೇಳೆ ಇದಿದ್ದರೆ ಅವರು ತೆಗೆದುಕೊಂಡು ಹೋಗಿದ್ದ ಪಟ್ಟಿಗೆ ಅನುಮೋದನೆ ‌ನೀಡುತಿದ್ದರು. ಬಿಜೆಪಿಗೆ ‌ಈಗ ಯಡಿಯೂರಪ್ಪ ಬೇಕಾಗಿಲ್ಲ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದರು.

ಯಡಿಯೂರಪ್ಪ ಒಂದು ರಾಜ್ಯವನ್ನು ಪ್ರತಿನಿಧಿಸುವ ವ್ಯಕ್ತಿ. ಕೇವಲ ಐದೇ ಐದು ನಿಮಿಷಗಳ ಭೇಟಿಗೂ ಕೇಂದ್ರ ಗೃಹಸಚಿವರು ಯಡಿಯೂರಪ್ಪ ಅವರಿಗೆ ಅವಕಾಶ ಕೊಟ್ಟಿಲ್ಲ. ಇದು ಕೇವಲ ಯಡಿಯೂರಪ್ಪ ಅವರಿಗೆ ಮಾಡಿದ ಅಪಮಾನವಲ್ಲ. ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಕರ್ನಾಟಕ ಎಂದರೆ ಬಿಜೆಪಿಗೆ ಅಷ್ಟು ತಾತ್ಸಾರವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಈಗ ಕಾಡುಗೊಲ್ಲ ಅಭಿವೃದ್ಧಿ ನಿಗಮದ ‌ಹೆಸರನ್ನು ಗೊಲ್ಲ ಅಭಿವೃದ್ಧಿ ನಿಗಮ ಎಂದು ಹೆಸರು ಬದಲಿಸುವ ಪ್ರಸ್ತಾಪ ರಾಜ್ಯ ಸರ್ಕಾರದ ಎದುರು ಇದೆ. ನಿಗಮದ ಘೋಷಣೆಯಾಗಿ ಒಂದೂವರೆ ‌‌ತಿಂಗಳು ಕಳೆದರೂ ಹಣ ನೀಡಿಲ್ಲ. ಬಿಜೆಪಿಯು ಮತದಾರರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂಜರಿದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.