ADVERTISEMENT

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಕಾಟಾಚಾರದಲ್ಲಿ ಗ್ರಾಮ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 22 ಜನವರಿ 2023, 5:34 IST
Last Updated 22 ಜನವರಿ 2023, 5:34 IST
ಐಡಿಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ವೃದ್ಧೆಯೊಬ್ಬರು ಶಾಸಕರು ಹಾಗೂ ತಹಶೀಲ್ದಾರ್ ಮುಂದೆ ಸಮಸ್ಯೆ ತೋಡಿಕೊಂಡರು
ಐಡಿಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ವೃದ್ಧೆಯೊಬ್ಬರು ಶಾಸಕರು ಹಾಗೂ ತಹಶೀಲ್ದಾರ್ ಮುಂದೆ ಸಮಸ್ಯೆ ತೋಡಿಕೊಂಡರು   

ಕೊಡಿಗೇನಹಳ್ಳಿ: ಪ್ರತಿ ತಿಂಗಳ ಮೂರನೇ ಶನಿವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಳ್ಳುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಕೇವಲ ದಾಖಲೆಗೆ ಸೀಮಿತವಾಗಿದ್ದು, ಇದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಉಪಯೋಗವಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು.

ಐಡಿಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ್ ಪ್ರಜ್ವಲ್ ಮಾತನಾಡಿ, ಇದು ಕೇವಲ ಕಾಟಾಚಾರದ ಕಾರ್ಯಕ್ರಮವಾಗಿದೆ. ಗ್ರಾಮಕ್ಕೆ ಬಸ್ ಸಮಸ್ಯೆ, ರಸ್ತೆ ಜಂಗಲ್ ಸಮಸ್ಯೆ, ವೃದ್ಧಾಪ್ಯ ವೇತನದಂತಹ ಹಲವು ಸಮಸ್ಯೆಗಳಿದ್ದರೂ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ, ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಅಸಮಾಧಾನ
ವ್ಯಕ್ತಪಡಿಸಿದರು.

ADVERTISEMENT

ಬಿಎಸ್‌‌ಪಿ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲ್ ಮಾತನಾಡಿದರು.

ಶಾಸಕ ಎಂ.ವಿ. ವೀರಭದ್ರಯ್ಯ, ತಹಶೀಲ್ದಾರ್ ಸುರೇಶಾಚಾರ್, ಗೇಡ್– 2 ತಹಶೀಲ್ದಾರ್ ತಿಪ್ಪಸ್ವಾಮಿ, ಸಿಡಿಪಿಒ ಅನಿತಾ, ರೇಷ್ಮೆ ಸಹಾಯಕ ನಿರ್ದೇಶಕ ಲಕ್ಷ್ಮಿನರಸಯ್ಯ, ಆಹಾರ ಶಿರಸ್ತೇದಾರ್ ಗಣೇಶ್, ಮೀನುಗಾರಿಕೆ ಇಲಾಖೆ ಮೇಲ್ವಿಚಾರಕ ರಂಗಸ್ವಾಮಿ, ಉಪ ತಹಶೀಲ್ದಾರ್ ಇನಾಯತ್‌ ಉಲ್ಲಾ, ಕಂದಾಯ ನಿರೀಕ್ಷಕ ನಾರಾಯಣಪ್ಪ, ಗ್ರಾಮ ಲೆಕ್ಕಾಧಿಕಾರಿ ರವಿಕುಮಾರ್, ಪಿಡಿಒ ನವೀನ್ ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.