ADVERTISEMENT

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಕಾಂಗ್ರೆಸ್ ಸ್ವಯಂ ಸೇವಕ: ರೋಹಿತ್ ಚಕ್ರತೀರ್ಥ

​ಪ್ರಜಾವಾಣಿ ವಾರ್ತೆ
Published 28 ಮೇ 2022, 8:43 IST
Last Updated 28 ಮೇ 2022, 8:43 IST
ರೋಹಿತ್ ಚಕ್ರತೀರ್ಥ
ರೋಹಿತ್ ಚಕ್ರತೀರ್ಥ    

ತುಮಕೂರು: ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಕಾಂಗ್ರೆಸ್‌ನಲ್ಲಿ ಸಕ್ರಿಯ ಕಾರ್ಯಕರ್ತ, ಸ್ವಯಂ ಸೇವಕರಾಗಿ ಕೆಲಸ ಮಾಡಿದ್ದರು ಎಂದು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದರು.

ನಗರದಲ್ಲಿ ಶನಿವಾರ ಜಿಲ್ಲಾ ಆಡಳಿತದಿಂದ ಹಮ್ಮಿಕೊಂಡಿದ್ದ 'ಅಮೃತ ಭಾರತಿಗೆ ಕನ್ನಡದಾರತಿ' ಕಾರ್ಯಕ್ರಮದಲ್ಲಿ ಮಾತನಾಡಿ, 1921ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು ಸಂಪೂರ್ಣವಾಗಿ ಆಯೋಜನೆ ಮಾಡಿದವರು ಹೆಡಗೇವಾರ್. ಇದು ಇವತ್ತಿನ ಎಷ್ಟು ಜನಕ್ಕೆ ಗೊತ್ತಿದೆ ಎಂದು ಪ್ರಶ್ನಿಸಿದರು.

ಹೆಡಗೇವಾರ್ ತೀರಿಕೊಳ್ಳುವವರಿಗೂ ಯಾವುದೇ ರಾಜಕೀಯ ಸೂಚನೆ ಕೊಟ್ಟಿರಲಲ್ಲ. ಆರ್ ಎಸ್ ಎಸ್ ಸಂಘಟನೆ ಕಟ್ಟಿದ್ದರು ಎಂದರು.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕೇಶವ ಬಲಿರಾಮ್ ಹೆಡಗೇವಾರ್ ಅವರು ಅನುಶೀಲನಾ ಸಮಿತಿಯ ಸದಸ್ಯರಾಗಿದ್ದರು. ಇಂದಿನ ಕೆಲವರಿಗೆ ಅನುಶೀಲನಾ ಸಮಿತಿ ಎಂದರೆ ಏನು ಅಂತ ಗೊತ್ತಿರಲಿಕ್ಕಿಲ್ಲ ಎಂದೂ ಹೇಳಿದರು.

ಬಂಗಾಳದಲ್ಲಿ ತೀವ್ರವಾಗಿದ್ದ ಕ್ರಾಂತಿ ಕಾರಿ ಸಂಘಟನೆ ಅನುಶೀಲನಾ ಸಮಿತಿ. ಬ್ರಿಟೀಷರ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಅಂತಹ ಸಮಿತಿಯಲ್ಲಿ ಹೆಗಡೇವಾರ್ ಸದಸ್ಯರಾಗಿದ್ದರು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.