ADVERTISEMENT

ಕೆಂಪೇಗೌಡರ ದೂರದೃಷ್ಟಿ ಇಂದಿನ ಆಡಳಿತಗಾರರಿಗೆ ಇಲ್ಲ

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 17:16 IST
Last Updated 27 ಜೂನ್ 2019, 17:16 IST
ತುಮಕೂರು ವಿವಿಯಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠವು ಆಯೋಜಿಸಿದ್ಧ ಕೆಂಪೇಗೌಡ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರೊ.ಬಿ.ಜಯಪ್ರಕಾಶಗೌಡ, ಕುಲಸಚಿವ ಪ್ರೊ.ಕೆ.ಎನ್.ಗಂಗಾ ನಾಯಕ್, ಕುಲಪತಿ ಪ್ರೊ.ವೈ.ಎಸ್.ಸಿದ್ಧೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು
ತುಮಕೂರು ವಿವಿಯಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠವು ಆಯೋಜಿಸಿದ್ಧ ಕೆಂಪೇಗೌಡ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರೊ.ಬಿ.ಜಯಪ್ರಕಾಶಗೌಡ, ಕುಲಸಚಿವ ಪ್ರೊ.ಕೆ.ಎನ್.ಗಂಗಾ ನಾಯಕ್, ಕುಲಪತಿ ಪ್ರೊ.ವೈ.ಎಸ್.ಸಿದ್ಧೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು   

ತುಮಕೂರು: 'ಕೆಂಪೇಗೌಡರ ದೂರದೃಷ್ಟಿ ಇಂದಿನ ಆಡಳಿತಗಾರರಿಗೆ ಇಲ್ಲ' ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ನಾಡಪ್ರಭು ಕೆಂಪೇಗೌಡ ಪೀಠದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದರು.

‘ಶಾಸನಗಳ ಆಧಾರದ ಮೇಲೆ ಕಾಲ ನಿರ್ಣಯವಾಗುತ್ತದೆ. ಆದರೆ, ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಯಾರು ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ. ಅವರ ಮೂಲ ಯಾವುದು ಎಂಬ ಬಗ್ಗೆಯೂ ಸಂಪೂರ್ಣ ಸಂಶೋಧನೆ ನಡೆದಿಲ್ಲ’ ಎಂದರು.

ADVERTISEMENT

‘ಸತ್ಯಕ್ಕೆ ಹತ್ತಿರವಾದ ಇತಿಹಾಸ ಸಂಶೋಧನೆ ಅಧ್ಯಯನ ಪೀಠದಿಂದ ನಡೆಯಬೇಕು’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ, ‘ಪ್ರಾದೇಶಿಕ ಇತಿಹಾಸ ರಚನೆಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು’ ಎಂದರು.

ಕುಲಸಚಿವ ಪ್ರೊ. ಕೆ. ಎನ್. ಗಂಗಾನಾಯಕ್, ಪೀಠದ ಸಂಯೋಜಕ ಡಾ. ಡಿ. ಸುರೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.