ADVERTISEMENT

ಗದ್ದುಗೆ ದರ್ಶನಕ್ಕಾಗಿ ತುಮಕೂರಲ್ಲಿ ಕಿಸಾನ್ ಸಮ್ಮಾನ್

​ಪ್ರಜಾವಾಣಿ ವಾರ್ತೆ
Published 1 ಜನವರಿ 2020, 15:18 IST
Last Updated 1 ಜನವರಿ 2020, 15:18 IST
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್   

ತುಮಕೂರು: ಕಿಸಾನ್ ಸಮ್ಮಾನ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಮಾಡಬೇಕು ಎನ್ನುವ ಆಸೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಇತ್ತು. ಈ ಪ್ರಯುಕ್ತ ತುಮಕೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ಏಕಕಾಲಕ್ಕೆ ದೇಶದ 6 ಕೋಟಿ ರೈತ ಕುಟುಂಬಗಳ ಖಾತೆಗೆ₹ 12 ಸಾವಿರ ಕೋಟಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡುವರು’ ಎಂದು ತಿಳಿಸಿದರು.

‘2022ರ ಒಳಗೆ ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಆಸೆಯನ್ನು ಮೋದಿ ಅವರು ಹೊಂದಿದ್ದಾರೆ. ನಿರಂತರವಾಗಿ ಕೃಷಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಮುಂದಿನ ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.