ADVERTISEMENT

ಅಕ್ರಮವಾಗಿ ಸಂಗ್ರಹಿಸಿದ್ದ 101 ಚೀಲ ಪಡಿತರ ರಾಗಿ ವಶ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 7:56 IST
Last Updated 17 ಜನವರಿ 2026, 7:56 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಐಸ್ಟಾಕ್ ಚಿತ್ರ

ಮಧುಗಿರಿ: ಪಟ್ಟಣದ ಬೆಂಕಿಪುರದ 8ನೇ ವಾರ್ಡ್‌ನ ಆಂಜನೇಯ ದೇವಸ್ಥಾನದ ಪಕ್ಕದಲ್ಲಿನ ಕಟ್ಟಡದ ಮೇಲೆ ಬುಧವಾರ ದಾಳಿ ನಡೆಸಿದ ತಹಶೀಲ್ದಾರ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು 101 ಚೀಲ ಪಡಿತರ ರಾಗಿ ವಶಪಡಿಸಿಕೊಂಡು ದೂರು ದಾಖಲಿಸಿದ್ದಾರೆ.

ADVERTISEMENT

ಪಡಿತರ ರಾಗಿ ಖರೀದಿಸಿ ಅಕ್ರಮವಾಗಿ ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಸ್ಥಳದಲ್ಲಿದ್ದ ಟೆಂಪೊ ಚಾಲಕನಿಂದ ಮಾಹಿತಿ ಪಡೆದ ತಹಶೀಲ್ದಾರ್ ಶ್ರೀನಿವಾಸ್, ಆಹಾರ ಶಿರಸ್ತೇದಾರ್ ಶೈಲಜಾ ಮತ್ತು ಆಹಾರ ನಿರೀಕ್ಷಕ ನಸ್ರುದ್ದೀನ್ ಅವರು ರಾಕೇಶ್ ಹಾಗೂ ಟೆಂಪೊ ಚಾಲಕ ಗಿರೀಶ್ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.