ಸಾವು
(ಪ್ರಾತಿನಿಧಿಕ ಚಿತ್ರ)
ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಬಳಿ ವ್ಯಕ್ತಿಯನ್ನು ಕೊಲೆ ಮಾಡಿ, ದೇಹದ ಭಾಗಗಳನ್ನು ತುಂಡರಿಸಿ ಬಿಸಾಡಲಾಗಿದೆ.
ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕೊಲೆ ಮಾಡಿರುವ ದುಷ್ಕರ್ಮಿಗಳು ದೇಹವನ್ನು ಕತ್ತರಿಸಿ ಪ್ರತ್ಯೇಕವಾಗಿ ಎಸೆದು ಹೋಗಿದ್ದಾರೆ.
ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.