
ಕೊರಟಗೆರೆ: ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದ ಇಲ್ಲಿನ ಸಂತೆ ಮೈದಾನಕ್ಕೆ ಪಟ್ಟಣ ಪಂಚಾಯಿತಿಯಿಂದ ರಕ್ಷಣಾ ಗ್ರಿಲ್, ಗೇಟ್ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ.
ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಂತೆ ಮೈದಾನ ಸುತ್ತ ಕಬ್ಬಿಣದ ಗ್ರಿಲ್ ಹಾಗೂ ಸಂತೆ ಮೈದಾನಕ್ಕೆ ಒಳ ಹೋಗುವ ಹಾಗೂ ಹೊರ ಬರುವ ದಾರಿಗಳಿಗೆ ಬೃಹತ್ ಗೇಟ್‌ಗಳನ್ನು ಅಳವಡಿಸಿದ್ದಾರೆ. ಪಾಳು ಬಿದ್ದಿದ್ದ ಶೌಚಾಲಯವನ್ನು ಸಂಪೂರ್ಣ ನವೀಕರಣಗೊಳಿಸಿ ನೀರಿನ ವ್ಯವಸ್ಥೆ ಮಾಡಿದ್ದಾರೆ.
ಸಂತೆ ಮೈದಾನ ಪಟ್ಟಣದ ಮುಖ್ಯ ರಸ್ತೆಯ ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಮುಖ್ಯ ರಸ್ತೆ ಬದಿಯಲ್ಲೇ ಇದ್ದರೂ ಹಲವು ವರ್ಷಗಳಿಂದ ಮೂಲ ಸೌಲಭ್ಯದಿಂದ ವಂಚಿತವಾಗಿತ್ತು. ಸಂತೆಗೆ ಬರುವವರು ಶೌಚಕ್ಕೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಪಟ್ಟಣ ಪಂಚಾಯಿತಿಯ ತೀವ್ರ ನಿರ್ಲಕ್ಷ್ಯದಿಂದಾಗಿ ಸಂತೆ ಮೈದಾನದಲ್ಲಿ ನಿರ್ಮಿಸಿದ್ದ ಶೌಚಾಲಯ ಒಂದು ದಿನಕ್ಕೂ ಉಪಯೋಗಕ್ಕೆ ಬಾರದೇ ಹಾಳಾಗಿತ್ತು. ಸಂತೆಗೆ ಬರುವವರಿಗೆ ಯಾವುದೇ ಭದ್ರತೆ ಇಲ್ಲದೆ ಹಲವು ಬಾರಿ ಮೊಬೈಲ್ ಸೇರಿದಂತೆ ಸರಗಳ್ಳತನ ಪ್ರಕರಣ ಕೂಡ ದಾಖಲಾಗಿದ್ದವು.
ಜುಲೈ 21ರಂದು ‘ಪ್ರಜಾವಾಣಿ’ಯಲ್ಲಿ ಈ ಬಗ್ಗೆ ‘ಕೊರಟಗೆರೆ ಸಂತೆಯಲ್ಲಿ ಸೌಕರ್ಯ ಕೊರತೆ’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.