ADVERTISEMENT

ಕೊರಟಗೆರೆ | ಲಾರಿ ಡಿಕ್ಕಿ: 7 ವರ್ಷದ ಮಗು ಸಾವು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 5:35 IST
Last Updated 17 ಫೆಬ್ರುವರಿ 2026, 5:35 IST
<div class="paragraphs"><p>ಅಪಘಾತ</p></div>

ಅಪಘಾತ

   

ಸಾಂದರ್ಭಿಕ ಚಿತ್ರ

ಕೊರಟಗೆರೆ: ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಪಾವಗಡ ಮೂಲದ ಜಸ್ವಿ (7) ಸ್ಥಳದಲ್ಲೆ ಮೃತಪಟ್ಟಿದೆ.

ADVERTISEMENT

ಪಾವಗಡ ತಾಲ್ಲೂಕಿನ ಗುಜ್ಜನಡು ಗ್ರಾಮದ ನರಸಿಂಹಪ್ಪ ತಮ್ಮ ಮಗಳು ಜಸ್ವಿಯೊಂದಿಗೆ ಬೆಂಗಳೂರು ಕಡೆಯಿಂದ ಸೋಮವಾರ ದ್ವಿಚಕ್ರವಾಹನದಲ್ಲಿ ಬರುವಾಗ ಕೊರಟಗೆರೆ ಬೈಪಾಸ್ ಬಳಿ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ಮಗು ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ ಸಾವನ್ನಪ್ಪಿದೆ.

ಪಿಎಸ್ಐ ವೈ.ಜಿ.ತೀರ್ಥೇಶ್ ಸ್ಥಳಕ್ಕೆ ಭೇಟಿ ನೀಡಿದ್ದರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.