ಸರಕು ಸಾಗಣೆ ವಾಹನ
ಕೊರಟಗೆರೆ: ಶಾಲಾ ಮಕ್ಕಳನ್ನು ಸರಕು ಸಾಗಣೆ ವಾಹನದಲ್ಲಿ ಹೊರ ಸಂಚಾರಕ್ಕೆ ಕರೆದುಕೊಂಡು ಹೋಗಿದ್ದ ಕೊರಟಗೆರೆ ತಾಲ್ಲೂಕಿನ ಚಿಂಪುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ.ನಟರಾಜು ಆದೇಶಿಸಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕ ಹನುಮಂತರಾಯಪ್ಪ, ಸಹ ಶಿಕ್ಷಕ ಅನಂತರಾಮು ಅಮಾನತುಗೊಂಡವರು.
ಶುಕ್ರವಾರ ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಾಲ್ಲೂಕಿನ ಚಿಕ್ಕಸಾಗ್ಗೆರೆ ಬಳಿಯ ಉದ್ಯಾನಕ್ಕೆ ಸರಕು ಸಾಗಣೆ ವಾಹನದಲ್ಲಿ ಕರೆದುಕೊಂಡು ಹೋಗಿದ್ದರು. ಅಲ್ಲಿಂದ ವಾಪಸ್ ಆಗುವಾಗ ಗೌಡನಕುಂಟೆ ಬಳಿ ವಾಹನ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳದೆ, ನಿರ್ಲಕ್ಷ್ಯ ವಹಿಸಿದ ಆರೋಪದ ಮೇರೆಗೆ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.