ಕೃಷಿ ಹೊಂಡ
ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಅರಸಾಪುರ ಬಳಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಅರಸಾಪುರದ ಶಂಕುತಲಮ್ಮ (39), ಗಂಗಮ್ಮ (36) ಮೃತರು. ದನ ಮೇಯಿಸಲು ಹೋಗಿದ್ದವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರ ಚಪ್ಪಲಿ, ಮೊಬೈಲ್ ಕೃಷಿಹೊಂಡದ ದಡದಲ್ಲಿ ಸಿಕ್ಕಿವೆ. ಕಾಲು ಜಾರಿ ಬಿದ್ದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.