ಯೋಗೀಶ್
ಕೊರಟಗೆರೆ: ತಾಲ್ಲೂಕಿನ ಚೀಲಗಾನಹಳ್ಳಿ ಬಳಿ ಭಾನುವಾರ ರಾತ್ರಿ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಚೀಲಗಾನಹಳ್ಳಿಯ ಸಿ.ಎನ್. ಯೋಗೀಶ್ (42) ಮೃತರು. ಸಿ.ಎನ್. ನರಸಿಂಹರಾಜು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಗೀಶ್ ಹಾಗೂ ನರಸಿಂಹರಾಜು ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಊರಿಗೆ ಮರಳುತ್ತಿದ್ದರು. ಊರು ತಲುಪುವ ವೇಳೆ ಬಿರುಗಾಳಿ ಸಹಿತ ಬಿದ್ದ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅವಘಡ ಸಂಭವಿಸಿದೆ.
ಅವಘಡ ಸಂಭವಿಸಿದ ವೇಳೆ ಸುರಿವ ಮಳೆ ಲೆಕ್ಕಿಸದೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರೇಂದ್ರ, ಮುಖಂಡರಾದ ಮಾರುತಿ, ಸತೀಶ ಎಂಬುವರು ಸ್ಥಳಕ್ಕೆ ದಾವಿಸಿ ವಿದ್ಯುತ್ ನಿಷ್ಕ್ರಿಯಗೊಳಿಸಿ ಆಗಬಹುದಾದ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.