ADVERTISEMENT

ಪಾವಗಡ: ಎಂಜಿನಿಯರ್, ಮೆಕ್ಯಾನಿಕ್ ಅಮಾನತು

​ಪ್ರಜಾವಾಣಿ ವಾರ್ತೆ
Published 31 ಮೇ 2024, 13:28 IST
Last Updated 31 ಮೇ 2024, 13:28 IST
   

ಪಾವಗಡ: ಕಚೇರಿ ಸಮಯದಲ್ಲೇ ಮದ್ಯ ಕುಡಿದು, ಬಿಯರ್ ಬಾಟಲಿಯಿಂದ ಹೊಡೆದಾಡಿಕೊಂಡಿದ್ದ ಪ್ರಕರಣದಲ್ಲಿ ಪಟ್ಟಣದ ಕೆಪಿಟಿಸಿಎಲ್ ಕಚೇರಿಯ ಕಿರಿಯ ಎಂಜಿನಿಯರ್ ವರದರಾಜು ಹಾಗೂ ಮೆಕ್ಯಾನಿಕ್ (ಗ್ರೇಡ್–1) ನರಸಿಂಹಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.

ಗಲಾಟೆಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಕಿರಿಯ ಎಂಜಿನಿಯರ್ ಶ್ರೀನಿವಾಸ್ ಹಾಗೂ ಮೆಕ್ಯಾನಿಕ್ (ಗ್ರೇಡ್–2) ಎಂ.ಆರ್.ಸಂತೋಷ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

ಕೆಪಿಟಿಸಿಎಲ್ ತುಮಕೂರು ವಿಭಾಗದ ಸೂಪರಿಂಟೆಂಡಿಂಗ್ ಎಂಜಿನಿಯರ್ ಶುಕ್ರವಾರ ಅಮಾನತು ಆದೇಶ ಹೊರಡಿಸಿದ್ದಾರೆ.

ADVERTISEMENT

ಕಚೇರಿ ಸಮಯದಲ್ಲೇ ಮದ್ಯ ಸೇವಿಸಿ, ಬಿಯರ್ ಬಾಟಲಿಯಿಂದ ಹೊಡೆದಾಡಿಕೊಂಡಿದ್ದ ಕುರಿತು ‘ಪ್ರಜಾವಾಣಿ’ಯಲ್ಲಿ ಮೇ 30ರಂದು ವರದಿ ಪ್ರಕಟವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.