ಶಿಡ್ಲಘಟ್ಟ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ, ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರ ಹಾಗೂ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು.
ಕೋವಿಡ್‌ನಿಂದಾಗಿ ದೇವಸ್ಥಾನಗಳಲ್ಲಿ ಜನರ ಸಂಖ್ಯೆ ಕಡಿಮೆಯಿತ್ತು. ಆದರೂ ಕೆಲವರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ಪೂಜೆ ನೆರವೇರಿಸಿದರು.
ಬಾಲಕೃಷ್ಣನ ಚಿತ್ರಪಟ: ನಗರದ ಉಲ್ಲೂರುಪೇಟೆಯ ಭಜನೆ ಮಂದಿರದಲ್ಲಿರುವ ಪುರಾತನ ತಂಜಾವೂರು ಚಿತ್ರಕಲೆಯ ಬಾಲಕೃಷ್ಣನ ಚಿತ್ರಪಟಕ್ಕೆ ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು. ಉಯ್ಯಾಲೆಯಲ್ಲಿ ಶ್ರೀಕೃಷ್ಣನ ಮೂರ್ತಿಯನ್ನಿಟ್ಟು ತೂಗಿ ಪೂಜಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.