ADVERTISEMENT

ತುರುವೇಕೆರೆ: ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಮೇ 2025, 13:44 IST
Last Updated 17 ಮೇ 2025, 13:44 IST
ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ತುರುವೇಕೆರೆ ತಾಲ್ಲೂಕು ಪಂಚಾಯಿತಿ ಮುಂಭಾಗ ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಿದರು
ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ತುರುವೇಕೆರೆ ತಾಲ್ಲೂಕು ಪಂಚಾಯಿತಿ ಮುಂಭಾಗ ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಿದರು   

ತುರುವೇಕೆರೆ: ಕರ್ನಾಟಕ ರಾಷ್ಟ್ರ ಪಕ್ಷದ (ಕೆಆರ್‌ಎಸ್) ಕಾರ್ಯಕರ್ತರು ಪಟ್ಟಣದ ತಾಲ್ಲೂಕು ಪಂಚಾಯಿತಿ ಮುಂಭಾಗ ಇ.ಒ ವಿರುದ್ಧ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ತಾಲ್ಲೂಕು ಪಂಚಾಯಿತಿವರೆಗೆ ಮೆರವಣಿಗೆಯಲ್ಲಿ ಬಂದ ಕಾರ್ಯಕರ್ತರು ಇ.ಒ ವಿರುದ್ಧ ಘೋಷಣೆ ಕೂಗಿದರು.

ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ.ಎಸ್ ಮಾತನಾಡಿ, ಇ.ಒ. ಶಿವರಾಜಯ್ಯ ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಂಡಿದ್ದು, ಇದನ್ನು ಪ್ರಶ್ನಿಸಿದ ಕೆ.ಆರ್.ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಇ.ಒ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಇ.ಒ ಅವರ ಅವರ ಕುರ್ಚಿಗೆ ಪೇಟ, ಹಾರವಿಟ್ಟು ಘೋಷಣೆ ಕೂಗಿದರು.

ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ರಘುನಂದನ, ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ಎಸ್‌ಸಿ, ಎಸ್‌ಟಿ ರಾಜ್ಯ ಕಾರ್ಯದರ್ಶಿ ಚೆನ್ನಯ್ಯ, ತಿಮ್ಮಪ್ಪ, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.