ADVERTISEMENT

ತುಮಕೂರು: ಗುಬ್ಬಿ ಬಳಿ KSRTC ಬಸ್-ಕಾರ್ ಮುಖಾಮುಖಿ ಡಿಕ್ಕಿ- ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 3:44 IST
Last Updated 20 ಜೂನ್ 2022, 3:44 IST
ಅಪಘಾತ ನಡೆದ ಸ್ಥಳ
ಅಪಘಾತ ನಡೆದ ಸ್ಥಳ   

ತುಮಕೂರು: ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರ್ ಮಧ್ಯೆ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ. ರಾಕೇಶ್ (21) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ಕಡೆಯಿಂದ ತೆರಳಿದ್ದ ಬಸ್, ತಿಪಟೂರು ಕಡೆಯಿಂದ ಬರುತ್ತಿದ್ದ ಕಾರ್ ಮುಖಾಮುಖಿ ಡಿಕ್ಕಿಯಾಗಿ, ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ADVERTISEMENT

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.