ADVERTISEMENT

ತಿಪಟೂರು | ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 28 ಮೇ 2025, 10:07 IST
Last Updated 28 ಮೇ 2025, 10:07 IST
   

ತಿಪಟೂರು: ರಾಷ್ಟ್ರೀಯ ಹೆದ್ದಾರಿಯ ಮತ್ತಿಹಳ್ಳಿ ಗೇಟ್‌ ಬಳಿ ಕೆಎಸ್ಆರ್‌ಟಿಸಿ ಬಸ್– ಬೈಕ್ ನಡುವೆ ಬುಧವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಅಯ್ಯನಬಾವಿ ನಿವಾಸಿಗಳಾದ ಉಮೇಶ್ (32), ರಜಿನಿಕಾಂತ್ (33) ಮೃತಪಟ್ಟವರು.

ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕಾಮಗಾರಿ ನಡೆಯುತ್ತಿದ್ದು ಒಂದು ಭಾಗದಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ತಿಪಟೂರು ಕಡೆಯಿಂದ ವೇಗವಾಗಿ ಬಂದ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ADVERTISEMENT

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಡಿವೈಎಸ್‌ಪಿ ವಿನಾಯಕ ಶೆಟಿಗೇರಿ, ಇನ್‌ಸ್ಪೆಕ್ಟರ್ ಚಂದ್ರಶೇಖರ್, ಹೊನ್ನವಳ್ಳಿ ಇನ್‌ಸ್ಪೆಕ್ಟರ್ ರಾಜೇಶ್ ಭೇಟಿ ನೀಡಿದ್ದರು. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.