ಕುಣಿಗಲ್: ಮಗನೊಬ್ಬ ತನ್ನ ಸ್ನೇಹಿತನೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿರುವ ಘಟನೆ ಸಿಸಿ ಟಿವಿ ಕ್ಯಾಮೆರಾಗಳ ದಾಖಲೆಗಳಿಂದ ಧೃಢಪಟ್ಟಿದೆ.
ಪಟ್ಟಣದ ಶಾಮೀರ್ ಆಸ್ಪತ್ರೆ ಮುಂಭಾಗದ ಐಸ್ ಕ್ರಿಂ ತಯಾರಿಕ ಘಟಕದಲ್ಲಿ ಭಾನುವಾರ ಮಾಲೀಕ ನಾಗೇಶ್ ಮೃತಪಟ್ಟಿದ್ದು, ಸಂಬಂಧಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.
ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಪೊಲೀಸರಿಗೆ ನಾಗೇಶ್ ಮಗ ಸೂರ್ಯ (19) ಮತ್ತು ಸ್ನೇಹಿತ ಸೇರಿ ಕೊಲೆ ಮಾಡಿರುವ ದಾಖಲೆಗಳು ಲಭ್ಯವಾಗಿವೆ.
ಮಗ ಮತ್ತು ಸ್ನೇಹಿತ ಪರಾರಿಯಾಗಿದ್ದು ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.