ಬಂಧನ (ಸಾಂದರ್ಭಿಕ ಚಿತ್ರ)
ಕುಣಿಗಲ್: ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ವಡಾಘಟ್ಟ ಗ್ರಾಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ಭಾನುವಾರ ರಾತ್ರಿ ಗುಂಡು ಹಾರಿಸಿ ನಾಲ್ಕು ವರ್ಷದ ಗಂಡು ಚಿರತೆಯನ್ನು ಕೊಂದಿದ್ದು, ಪ್ರಮುಖ ಆರೋಪಿಯನ್ನು ಅರಣ್ಯಾಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.
ವಡಾಘಟ್ಟ ಗ್ರಾಮದ ನಾಗರಾಜು ಬಂಧಿತ. ಈತನ ಸಹಚರರಾದ ಮೂರ್ತಿ ಮತ್ತು ರವಿ ಜತೆಗೂಡಿ ಅರಣ್ಯದ ಅಂಚಿನಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಗುಂಡು ಹಾರಿಸಿ ಕೊಂದಿದ್ದರು. ಮಾಹಿತಿ ತಿಳಿದ ವಲಯ ಅರಣ್ಯಾಧಿಕಾರಿ ಜಗದೀಶ್ ಅವರ ತಂಡ ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಉಳಿದ ಇಬ್ಬರು ಪರಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.