
ಪ್ರಜಾವಾಣಿ ವಾರ್ತೆಅಪಘಾತ
–ಪ್ರಾತಿನಿಧಿಕ ಚಿತ್ರ
ಕುಣಿಗಲ್: ತಾಲ್ಲೂಕಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಎರಡು ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಚಾಕೇನಹಳ್ಳಿ ಗೇಟ್ ಬಳಿ ಹಾಸನ ಕಡೆಯಿಂದ ಬಂದ ಬೈಕ್ ಸವಾರ ಪಾದಚಾರಿ ಚಂದ್ರಪ್ಪ (59) ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಪಟ್ಟಣದ ಸಪ್ತಗಿರಿ ಆಸ್ಪತ್ರೆ ಮುಂಭಾಗ ಅಂಚೇಪಾಳ್ಯದಿಂದ ಮಂಜುನಾಥ್ (25) ತನ್ನ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಬರುತ್ತಿರುವಾಗ ಅಡ್ಡವಾಗಿ ಬಂದ ಪಾದಚಾರಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ತಲೆಗೆ ಗಾಯಗಳಾಗಿ ಮೃತಪಟ್ಟಿದ್ದಾರೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.