
ಕುಣಿಗಲ್: ಡಿ.ಕೆ.ಎಸ್ ಚಾರಿಟಬಲ್ ಟ್ರಸ್ಟ್‌ನಿಂದ ಸಾಂಸ್ಕೃತಿಕ, ಕ್ರೀಡಾ, ಮನೋರಂಜನೆ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಒಳಗೊಂಡ ಕುಣಿಗಲ್ ಉತ್ಸವ ಜನವರಿ 9ರಿಂದ 11ರವರೆಗೆ ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, 9ರಂದು ರಂಗೋಲಿ, ಚಿತ್ರಕಲೆ ಸ್ಪರ್ಧೆ. ತಾಲ್ಲೂಕಿನ 200 ಗ್ರಾಮ ದೇವತಾ ಉತ್ಸವ, ವಾಯ್ಸ ಆಫ್ ಕುಣಿಗಲ್, ಸಾಂಪ್ರದಾಯಿಕ ಉಡುಗೆ ತೊಡುಗೆ ಪ್ರದರ್ಶನ, ಕೇಶ ವಿನ್ಯಾಸ ಸ್ಪರ್ಧೆ, ಎಲ್‌ಕೆಜಿ ಮತ್ತು ಯುಕೆಜಿಯಿಂದ 4ನೇ ತರಗತಿ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ, ಆದರ್ಶ ದಂಪತಿ ಸ್ಪರ್ಧೆ, ರಂಗಗೀತೆ, ಕಬಡ್ಡಿ, ಕೊಕ್ಕೊ, ಥ್ರೋಬಾಲ್, ವಾಲಿಬಾಲ್ ಪಂದ್ಯಗಳು ನಡೆಯಲಿವೆ.
10ರಂದು ಬೆಳಗ್ಗೆ ಮದರಂಗಿ ಕಾರ್ಯಕ್ರಮ, ಎಸ್ಎಸ್ಎಲ್‌ಸಿ ಮತ್ತು ಪಿಯು ಉತ್ತೀರ್ಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಂಜೆ ಶ್ರೀನಿವಾಸ ಕಲ್ಯಾಣೋತ್ಸವ, ಸಮೂಹ ನೃತ್ಯ, ರಂಗಗೀತೆ ಕಾರ್ಯಕ್ರಮಗಳು ಇರಲಿವೆ.
11ರಂದು ಬೆಳಗ್ಗೆ ಮೂರು ಸಾವಿರ ವಿದ್ಯಾರ್ಥಿಗಳಿಂದ ಮ್ಯಾರಾಥಾನ್, ರಂಗಗೀತೆ, ದೇಹದಾರ್ಡ್ಯ, ಚಲನಚಿತ್ರ ನಟರಿಂದ ರಸಮಂಜರಿ ನಡೆಯಲಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಭಾಗವಹಿಸಲಿದ್ದಾರೆ. ಸ್ಪರ್ಧೆಗಳಲ್ಲಿ ಭಾಗವಹಿಸಿದವರಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.