ADVERTISEMENT

ಪಾವಗಡ: ಕುರುಬ ಸಮಾಜ ಬಳಗದಿಂದ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 6:28 IST
Last Updated 29 ಜನವರಿ 2026, 6:28 IST
ಪಾವಗಡದಲ್ಲಿ ಕುರುಬ ಸಮಾಜ ಬಳಗದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮಕ್ಕಳನ್ನು ಸತ್ಕರಿಸಲಾಯಿತು
ಪಾವಗಡದಲ್ಲಿ ಕುರುಬ ಸಮಾಜ ಬಳಗದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮಕ್ಕಳನ್ನು ಸತ್ಕರಿಸಲಾಯಿತು   

ಪಾವಗಡ: ಕುರುಬ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿ ಸಾಧನೆಯತ್ತ ಸಾಗಬೇಕು ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಸಿ. ಅಂಜಿನಪ್ಪ ತಿಳಿಸಿದರು.

ಪಟ್ಟಣದಲ್ಲಿ ಕುರುಬ ಸಮಾಜ ಬಳಗ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರದಲ್ಲಿ ಅವರು ಮಾತನಾಡಿದರು.

ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಬಗ್ಗೆ ಜ್ಞಾನ ಪಡೆದು ಎಲ್ಲ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿ ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು. ಆಗ ಮಾತ್ರ ಸಮುದಾಯದ ಜನರ ಏಳ್ಗೆ ಸಾಧ್ಯ ಎಂದು ತಿಳಿಸಿದರು.

ADVERTISEMENT

ಕುರುಬ ಸಮಾಜ ಬಳಗದ ಪಿ.ವಿ.ಅನಿಲ್ ಕುಮಾರ್, ಹಿಂದುಳಿದ ಪ್ರದೇಶವಾದ ತಾಲ್ಲೂಕಿನ ಕುರುಬ ಸಮುದಾಯದ ಪ್ರತಿಭೆಗಳು ಅತ್ಯಧಿಕ ಸಂಖ್ಯೆಯಲ್ಲಿ ಹೊರಹೊಮ್ಮಿ ಸಮಾಜದ ಉನ್ನತಿಗೆ ಕಾರ್ಯಪ್ರವೃತ್ತರಾಗಬೇಕು. ಮುಂದಿನ ಪೀಳಿಗೆಗೂ ಮಾದರಿಯಾಗಬೇಕು ಎಂದರು. 

ಜಿಲ್ಲಾ ಕಾಳಿದಾಸ ವಿದ್ಯಾವರ್ಧಕ ಸಂಘದ ಮೈಲಪ್ಪ, ಉನ್ನತ ಸ್ಥಾನ ಅಲಂಕರಿಸಿದ ನಂತರ ಸಮುದಾಯದಲ್ಲಿ ಅಗತ್ಯವಿರುವವರಿಗೆ ನೆರವು ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಸಮಾಜದ ಪ್ರಗತಿಗೆ ಸಹಕಾರ ನೀಡಬೇಕು ಎಂದರು.

ಪುರಸಭೆ ಮಾಜಿ ಸದಸ್ಯ ಮನು ಮಹೇಶ್, ವಿದ್ಯಾರ್ಥಿಗಳಲ್ಲಿ ಅಡಗಿರುವ ಯಾವುದೇ ಪ್ರತಿಭೆ ಗುರುತಿಸುವ, ಪ್ರೋತ್ಸಾಹಿಸಬೇಕು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಗುಮ್ಮಘಟ್ಟ ವಿಎಸ್‌ಎಸ್‌ಎನ್ ಅಧ್ಯಕ್ಷ ಕೆ.ಶ್ರೀನಿವಾಸಲು, ಪಿ.ಟಿ.ಜಗನ್ನಾಥ, ಪಿ.ಎಲ್ ದೇವರಾಜು, ಎ.ಎನ್.ಎಲ್. ಬಾಬು, ಪಿ.ವಿ. ಅನಿಲ್ ಕುಮಾರ್, ಆರ್.ಎ. ಹನುಮಂತರಾಯಪ್ಪ, ಮಾಜಿ ಪುರಸಬೆ ಸದಸ್ಯ ಸಿ.ಎನ್.ರವಿ, ಸುಜಾತ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಐ.ಜಿ.ನಾಗರಾಜು, ಹನುಮಂತರಾಯಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರವಿಕುಮಾರ್, ಅನಿಲ್ ಹಂಡೆ, ಅಲಕುಂದಪ್ಪ, ಆರ್.ಎಮ್.ಬಾಲಾಜಿ, ಅಲಕುಂದ್‌ರಾಜು, ರಾಘವೇಂದ್ರ, ಗಿರೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.