ADVERTISEMENT

ಎಸ್‌ಟಿ ಪಟ್ಟಿಗೆ ಸೇರಿಸಲು ಕುರುಬರ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 1:59 IST
Last Updated 21 ಸೆಪ್ಟೆಂಬರ್ 2020, 1:59 IST

ತುಮಕೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 9ಕ್ಕೆ ಹೆಚ್ಚಿಸಬೇಕು ಎಂದು ಕೋರಿ ಸಮುದಾಯದ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕುರುಬ ಸಮಾಜವು ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಇಂದಿಗೂ ಅಲೆಮಾರಿ ಜೀವನ ನಡೆಸುತ್ತಿದೆ. ಸಮುದಾಯ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಪಟ್ಟಿಯಲ್ಲಿದೆ. ಆದರೆ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ ಎಂದರು.

ಬುಡಕಟ್ಟು ಜನಾಂಗವಾಗಿರುವ ಕುರುಬ ಸಮುದಾಯವು ಬ್ರಿಟಿಷರ ಆಳ್ವಿಕೆಯಿಂದಲೂ ಎಸ್‌ಟಿ ಮೀಸಲಾತಿ ಪಟ್ಟಿಯಲ್ಲಿದೆ. ರಾಜ್ಯದಲ್ಲಿ ಜೇನು ಕುರುಬ, ಕಾಡು ಕುರುಬ, ಗೊಂಡ, ರಾಜಗೊಂಡ ಮತ್ತು ಕುರುಬ (ಕೊಡಗು ಜಿಲ್ಲೆ) ಪರಿಶಿಷ್ಟ ಪಂಗಡ ಪಟ್ಟಿಯಲ್ಲಿವೆ. ಈ ಸೌಲಭ್ಯ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಹೇಳಿದರು.

ADVERTISEMENT

ಈ ಬಗ್ಗೆ ಹಲವು ವರ್ಷಗಳಿಂದ ಜಾಗೃತಿ ಸಭೆಗಳು, ಸಂವಾದಗಳು, ಸಮಾವೇಶದಲ್ಲಿನ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗಿದೆ. ಈಗಲಾದರೂ ಮುಖ್ಯಮಂತ್ರಿ ಅವರು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.