ADVERTISEMENT

ಗೊಂದಲ ಸೃಷ್ಟಿ; ಆರೋಪ

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 17:26 IST
Last Updated 20 ಜುಲೈ 2020, 17:26 IST

ತುಮಕೂರು: ‘ಬಿ.ಕೆ.ಮಂಜುನಾಥ್‍ ಅವರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಅವರು ಕಾಳಿದಾಸ ವಿದ್ಯಾವರ್ಧಕ ಸಂಘಕ್ಕೆ ಅಧ್ಯಕ್ಷರಾಗಿರುವುದು ಸತ್ಯ. ಆದರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂದು ಬಿಂಬಿಸಿಕೊಂಡಿರುವುದು ಸರಿಯಲ್ಲ. ಈ ಮೂಲಕ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಆರ್.ಸುರೇಶ್, ಕಾರ್ಯಾಧ್ಯಕ್ಷ ಆರ್.ಎಂ.ಸಿ.ರಾಜು ತಿಳಿಸಿದ್ದಾರೆ.

ಸಂಘದ ಅಧ್ಯಕ್ಷ ಟಿ.ಎಂ.ನಂಜರಾಜು ಅವರು ರಾಜೀನಾಮೆ ನೀಡಿದ ಬಳಿಕ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಖಜಾಂಚಿಯಾಗಿದ್ದ ಟಿ.ಆರ್.ಸುರೇಶ್‍ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿ ಕಾರ್ಯಕಾರಿ ಸಮಿತಿ ರಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

‘ಈ ರೀತಿ ಅಪಪ್ರಚಾರ ಮಾಡಿ ಸಂಘ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ರೀತಿ ಮಾಡಬಾರದು ಎಂದು ತಿಳಿಸುತ್ತೇವೆ. ಇನ್ನು ಮುಂದೆ ಮಂಜುನಾಥ್ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂದು ಬಿಂಬಿಸಿಕೊಳ್ಳಬಾರದು. ಇದನ್ನು ಮುಂದುವರಿಸಿದರೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.