ADVERTISEMENT

ವಲಸೆ ಕಾರ್ಮಿಕರಿಗೆ ಮೂಲ ಸೌಕರ್ಯ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2020, 13:08 IST
Last Updated 26 ಮಾರ್ಚ್ 2020, 13:08 IST

ತುಮಕೂರು: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆ ಹಾಗೂ ಖಾಸಗಿ ಸಂಸ್ಥೆಗಳ ಯೋಜನೆ, ಕಾಮಗಾರಿಗಳಲ್ಲಿ ತೊಡಗಿರುವ ವಿವಿಧ ರಾಜ್ಯ ಅಥವಾ ಜಿಲ್ಲೆಗಳಿಂದ ಬಂದ ವಲಸೆ ಕಾರ್ಮಿಕರಿಗೆ ಮೂಲಸೌಕರ್ಯ ಒದಗಿಸುವಂತೆ ಕಾರ್ಮಿಕ ಇಲಾಖೆಯು ಸೂಚಿಸಿದೆ.

ಸೂಕ್ತ ಆಹಾರ, ಕುಡಿಯುವ ನೀರು, ವಸತಿ, ಸೋಪ್‌, ಸ್ಯಾನಿಟೈಸರ್, ಮಾಸ್ಕ್, ಪ್ರಥಮ ಚಿಕಿತ್ಸೆ ಮತ್ತು ಇತರ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಗುತ್ತಿಗೆದಾರರು, ಆಯಾ ಇಲಾಖೆಯ ಎಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದೆ.

ಒಂದು ವೇಳೆ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ವಲಸೆ ಕಾರ್ಮಿಕರ ಮಾಹಿತಿಯನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಜಿಲ್ಲಾಡಳಿತವು ಸೌಕರ್ಯ ಒದಗಿಸಲಿದೆ ಎಂದು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.