ADVERTISEMENT

ತುಮಕೂರು: ಪೌರ ಕಾರ್ಮಿಕರಿಗೆ ಸಮವಸ್ತ್ರ

​ಪ್ರಜಾವಾಣಿ ವಾರ್ತೆ
Published 7 ಮೇ 2020, 12:05 IST
Last Updated 7 ಮೇ 2020, 12:05 IST
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಿಸಿದರು. ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸಿಇಒ ಶುಭಾ ಕಲ್ಯಾಣ್, ಎಸ್ಪಿ ವಂಶಿಕೃಷ್ಣ, ಪಾಲಿಕೆ ಆಯುಕ್ತ ಭೂಬಾಲನ್, ಶಾಸಕ ಬಿ.ಜಿ.ಜ್ಯೋತಿಗಣೇಶ್, ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್ ಕುಮಾರ್ ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಹಾಗೂ ಟಿಎಂಸಿಸಿ ಉಪಾಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿ ಇದ್ದರು

ತುಮಕೂರು: ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ತುಮಕೂರು ಮರ್ಚೆಂಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ (ಟಿಎಂಸಿಸಿ)ನಿಂದ ಗುರುವಾರ ಸಮವಸ್ತ್ರಗಳನ್ನು ವಿತರಿಸಲಾಯಿತು.

ಆರೋಗ್ಯ ಕಾಪಾಡಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಒಂದು ಸಾವಿರ ಪೌರ ಕಾರ್ಮಿಕರಿಗೆ ಸಮವಸ್ತ್ರ ಸೇರಿದಂತೆ ಅಗತ್ಯ ಸುರಕ್ಷಾ ಸಾಧನಗಳನ್ನು ನೀಡಲಾಗಿದೆ ಎಂದು ಟಿಎಂಸಿಸಿ ಅಧ್ಯಕ್ಷ ಎನ್.ಎಸ್.ಜಯಕುಮಾರ್ ತಿಳಿಸಿದರು.

₹ 12 ಲಕ್ಷ ವೆಚ್ಚದಲ್ಲಿ ಪೌರ ಕಾರ್ಮಿಕರಿಗೆ ಹೆಲ್ಮೆಟ್, ಗ್ಲೌಸ್, ಸಮವಸ್ತ್ರ, ಏಪ್ರಾನ್‌ಗಳನ್ನು ಖರೀದಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರ ಮೂಲಕ ಪಾಲಿಕೆ ಹಸ್ತಾಂತರಿಸಲಾಗಿದೆ ಎಂದರು.

ADVERTISEMENT

ಪೌರ ಕಾರ್ಮಿಕರು ಸಾಧನಾ ಸಲಕರಣೆ ಹಾಗೂ ಸಮವಸ್ತ್ರ ಧರಿಸುವ ಮೂಲಕ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.