ADVERTISEMENT

ಕಿರ್ಲೋಸ್ಕರ್ ಎದುರು ಕಾರ್ಮಿಕರ ಧರಣಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 15:11 IST
Last Updated 28 ಜುಲೈ 2020, 15:11 IST
ಕಾರ್ಮಿಕರ ವಜಾ ಮಾಡಿರುವುದನ್ನು ಖಂಡಿಸಿ ಕಾರ್ಮಿಕರು ತುಮಕೂರು ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಿರ್ಲೋಸ್ಕರ್ ಎಲೆಕ್ಟ್ರಿಕ್ ಕಂಪನಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು
ಕಾರ್ಮಿಕರ ವಜಾ ಮಾಡಿರುವುದನ್ನು ಖಂಡಿಸಿ ಕಾರ್ಮಿಕರು ತುಮಕೂರು ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಿರ್ಲೋಸ್ಕರ್ ಎಲೆಕ್ಟ್ರಿಕ್ ಕಂಪನಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು   

ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಿರ್ಲೋಸ್ಕರ್ ಎಲೆಕ್ಟ್ರಿಕ್ ಕಂಪನಿಯ ಕಾರ್ಮಿಕರನ್ನುವಜಾ ಮಾಡಿರುವುದನ್ನು ಖಂಡಿಸಿ, ಕಾರ್ಮಿಕರು ಕಂಪನಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಿರ್ಲೋಸ್ಕರ್ ಎಲೆಕ್ಟ್ರಿಕ್ ಕಂಪನಿಯು ಪ್ರಾರಂಭವಾಗಿ 25 ವರ್ಷಗಳು ಕಳೆದಿದ್ದು, 84 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. 8 ವರ್ಷಗಳಿಂದಲೂ ವೇತನ ಪರಿಷ್ಕರಣೆ ಮಾಡಿಲ್ಲ. ವೇತನವನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ. ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿದರು.

‘ಕಳೆದ 22 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲಸದ ಸಮಯದಲ್ಲಿ ಕೈಬೆರಳುಗಳನ್ನು ಕಳೆದುಕೊಂಡಿದ್ದೇವೆ. ಈಗ 36 ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಹಲವು ವರ್ಷಗಳಿಂದ ಇಎಸ್‌ಐ, ಪಿಎಫ್‌ ಸೌಲಭ್ಯ ನೀಡಿಲ್ಲ. ಕೆಲಸ ನಿರ್ವಹಿಸುವ ವೇಳೆ ಹಲವರು ಅಂಗವಿಕಲರಾಗಿದ್ದಾರೆ. ಪರಿಹಾರ ಕೇಳಿದರೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಾರೆ’ ಎಂದು ದೂರಿದರು.

ADVERTISEMENT

ಕೋವಿಡ್ ನೆಪ ಹೇಳಿ ಕಾರ್ಮಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಇದೀಗ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ವಿಷ ಕುಡಿದು ಸಾಯುವ ಪರಿಸ್ಥಿತಿ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.