ADVERTISEMENT

ಲಾಕ್‌ಡೌನ್‌: ಮನೆಯಲ್ಲೇ ಉಳಿದ ಚಿಂತಾಮಣಿ ಜನ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 17:09 IST
Last Updated 5 ಜುಲೈ 2020, 17:09 IST
ಚಿಂತಾಮಣಿಯಲ್ಲಿ ಭಾನುವಾರ ಲಾಕ್ ಡೌನ್ ನಿಂದ ಬಣಗುಡುತ್ತಿರುವ ಜೋಡಿ ರಸ್ತೆ
ಚಿಂತಾಮಣಿಯಲ್ಲಿ ಭಾನುವಾರ ಲಾಕ್ ಡೌನ್ ನಿಂದ ಬಣಗುಡುತ್ತಿರುವ ಜೋಡಿ ರಸ್ತೆ   

ಚಿಂತಾಮಣಿ: ಲಾಕ್‌ಡೌನ್ ನಗರ ಹಾಗೂ ತಾಲ್ಲೂಕಿನಲ್ಲಿ ಸಂಪೂರ್ಣ ಯಶಸ್ವಿಯಾಯಿತು.

ಅವಿಭಜಿತ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾದ ನಗರದಲ್ಲಿ ಅಂಗಡಿ, ವಾಣಿಜ್ಯ ಕೇಂದ್ರಗಳು ಸೇರಿದಂತೆ ಎಲ್ಲವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಸರ್ಕಾರಿ, ಖಾಸಗಿ ಬಸ್‌ಗಳು, ಲಾರಿ, ಕಾರು ಸೇರಿದಂತೆ ಯಾವುದೇ ವಾಹನಗಳು ರಸ್ತೆಗೆ ಇಳಿಯಲಿಲ್ಲ.

ಆಸ್ಪತ್ರೆ ಮತ್ತು ಔಷಧ ಅಂಗಡಿಗಳನ್ನು ಹೊರತುಪಡಿಸಿ ಇತರೆ ಯಾವುದೇ ವಹಿವಾಟು ನಡೆಯಲಿಲ್ಲ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದವಸ ಧಾನ್ಯಗಳು, ಜಾನುವಾರುಗಳ ವಹಿವಾಟು ಸ್ತಬ್ಧಗೊಂಡಿತ್ತು. ಟೊಮೆಟೊ ಮಾರುಕಟ್ಟೆಗೆ ಬೆಳಿಗ್ಗೆ ಮಾತ್ರ ಅವಕಾಶ ನೀಡಲಾಗಿತ್ತು. ಜನರು ಸ್ವಯಂ ಪ್ರೇರಿತರಾಗಿ ಮನೆಗಳಲ್ಲಿ ಉಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.