ADVERTISEMENT

ಗುಬ್ಬಿ | ಚಿರತೆ ದಾಳಿ: ಭಯಭೀತರಾದ ಗ್ರಾಮಸ್ಥರು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 14:31 IST
Last Updated 5 ಮಾರ್ಚ್ 2025, 14:31 IST
ಕಡಬಾ ಹೋಬಳಿ ಕರೆಗೌಡನಹಳ್ಳಿ ಗ್ರಾಮದ ರೈತ ಶಿವಕುಮಾರ್ ಅವರ ಎಮ್ಮೆ ಕರುವನ್ನು ಚಿರತೆ ಸಾಯಿಸಿದೆ
ಕಡಬಾ ಹೋಬಳಿ ಕರೆಗೌಡನಹಳ್ಳಿ ಗ್ರಾಮದ ರೈತ ಶಿವಕುಮಾರ್ ಅವರ ಎಮ್ಮೆ ಕರುವನ್ನು ಚಿರತೆ ಸಾಯಿಸಿದೆ   

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಕರೆಗೌಡನಹಳ್ಳಿ ಗ್ರಾಮದ ರೈತ ಶಿವಕುಮಾರ್ ಮನೆ ಆವರಣದ ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಕರುವಿನ ಮೇಲೆ ಬುಧವಾರ ಬೆಳಗ್ಗೆ ಚಿರತೆ ದಾಳಿ ಮಾಡಿ ಸಾಯಿಸಿದೆ.

ಕೃಷಿಯ ಜೊತೆ ಹೈನುಗಾರಿಕೆಯನ್ನು ಉಪಕಸುಬನ್ನಾಗಿ ಮಾಡಿಕೊಂಡು ಶಿವಕುಮಾರ್ ಕುಟುಂಬ ಬದುಕು ಕಟ್ಟಿಕೊಂಡಿತ್ತು. ಚಿರತೆ ದಾಳಿಯಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯವರು ಆಯಕಟ್ಟಿನ ಜಾಗದಲ್ಲಿ ಬೋನನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.